ಇದು ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್.... ಸರ್ಕಾರಿ ಶಾಲೆಯ ಅವ್ಯವಸ್ಥೆ ಕುರಿತು ನಿರಂತರ ಸುದ್ದಿ ಪ್ರಸಾರ ಮಾಡಿದ ಬೆನ್ನಲ್ಲೆ, ಸಂಬಂಧಪಟ್ಟ ಅಧಿಕಾರಿಗಳು ಈ ಶಾಲೆಗೆ ಹೊಸದಾಗಿ ಐದು ಕೊಠಡಿಗಳ ನಿರ್ಮಾಣ ಮತ್ತು ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ.
ಹೌದು… ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ಶಿರಡಿ ನಗರದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅವ್ಯವಸ್ಥೆ ಬಗ್ಗೆ ಪಬ್ಲಿಕ್ ನೆಕ್ಸ್ಟ್ ವರದಿಯನ್ನು ಬಿತ್ತರಿಸಿತ್ತು. ವರದಿಗೆ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆ, ಶಾಲೆಯ ನಿರ್ವಹಣೆ ಎನ್‌ಡಿಆರ್ ನಿಂದ 3 ಕೊಠಡಿ ಮತ್ತು ವಿವೇಕ ಪ್ರೋಗ್ರಾಂ ನಿಂದ 2 ಕೊಠಡಿಗಳು ಹಾಗೂ ಇದ್ದ ಶಾಲೆಯ ನಿರ್ವಹಣೆಗಾಗಿ ಶಾಸಕರ ಅಡಿಯಲ್ಲಿ 3 ಲಕ್ಷ ರೂ. ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ ಬಗ್ಗೆ ಈ ಶಾಲೆಯ ಮಕ್ಕಳ ಪಾಲಕರು ಪಬ್ಲಿಕ್ ನೆಕ್ಸ್ಟ್ ಗೆ ಅಭಿನಂದನೆ ಸಲ್ಲಿದ್ದಾರೆ. ಈ ಬಗ್ಗೆ ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ಕಂಪ್ಲೀಟ್ ಡಿಟೈಲ್ಸ್ ನೀಡುತ್ತಾರೆ ನೋಡಿ...
ಒಂದು ಅನುದಾನ ಬಿಡುಗಡೆಯಾಗಿದ್ದಕ್ಕೆ ಪಾಲಕರು ಪಬ್ಲಿಕ್ ನೆಕ್ಸ್ಟ್ ಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಸುದ್ದಿ ಪ್ರಸಾರ ಆಗುತ್ತಿದ್ದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, PWD ಅಧಿಕಾರಿಗಳು ಶಿರಡಿ ನಗರ ಸರ್ಕಾರಿ ಶಾಲೆಗೆ ಭೇಟಿ ನೀಡಿ ಕೊಠಡಿ ಕಟ್ಟಲು ಈಗಾಗಲೇ ಅಳತೆಯನ್ನು ಕೂಡ ತೆಗೆದುಕೊಂಡಿದ್ದಾರೆ. ಆದಷ್ಟು ಬೇಗ ಈ ಶಾಲೆಯಲ್ಲಿ ಐದು ಕೊಠಡಿಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಶಿಕ್ಷಣಾಧಿಕಾರಿಗಳು ಹೇಳಿದ್ದಾರೆ.
ಒಟ್ನಲ್ಲಿ ಸರ್ಕಾರ ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಎನ್ನುತ್ತಿದೆ. ಅದೇರೀತಿ ಶಿರಡಿ ನಗರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಯನ್ನು ಆದಷ್ಟು ಬೇಗ ನಿರ್ವಹಣೆ ಮಾಡಿ ಮಕ್ಕಳಿಗೆ ಅನುಕೂಲ ಮಾಡಿ ಕೊಡಬೇಕಾಗಿದೆ...
ಈರಣ್ಣ ವಾಲಿಕಾರ, ಪಬ್ಲಿಕ್ ನೆಕ್ಸ್ಟ್, ಹುಬ್ಬಳ್ಳಿ...
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/09/2022 05:10 pm