ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅನ್ನದಾತನ ಕಷ್ಟವನ್ನು ಎತ್ತಿ ಹಿಡಿದ ಪಬ್ಲಿಕ್ ನೆಕ್ಸ್ಟ್; ವಿಸ್ತೃತ ವರದಿಯ ಬಿಗ್‌ ಇಂಪ್ಯಾಕ್ಟ್‌

ಹುಬ್ಬಳ್ಳಿ: ರೈತನ ಕಷ್ಟದ ಕುರಿತು ಪಬ್ಲಿಕ್ ನೆಕ್ಸ್ಟ್ ಪ್ರಸಾರ ಮಾಡಿರುವ ವರದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸಿದೆ. ಹೆಸರು ಖರೀದಿ ಕೇಂದ್ರವಿಲ್ಲದೇ ಪರದಾಡುತಿದ್ದ ಅನ್ನದಾತ ಕಣ್ಣೀರಿನ ಸಂಗತಿಯನ್ನು ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸುವ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ಮಹತ್ವದ ಕಾರ್ಯವನ್ನು ನಿಮ್ಮ ಪಬ್ಲಿಕ್ ನೆಕ್ಸ್ಟ್ ಮಾಡಿದ್ದು, ಇದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.

ಹೌದು.. ಮೊನ್ನೆಯಷ್ಟೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ಹೆಸರಿಗೆ ಮಾತ್ರ ರೈತರ ಪರ ಸರ್ಕಾರ ಹೆಸರು ಬೆಳಿಗಿಲ್ಲ ಸೂಕ್ತ ಪರಿಹಾರ ಎನ್ನುವ ಶೀರ್ಷಿಕೆ ಅಡಿಯಲ್ಲಿ ಅನ್ನದಾತನ ಕಷ್ಟದ ವಿಸ್ತೃತ ವರದಿಯನ್ನು ಪ್ರಸಾರ ಮಾಡಿತ್ತು. ಅಲ್ಲದೇ ಕೇಂದ್ರ ಸಚಿವರ ಹಾಗೂ ರಾಜ್ಯ ಕೃಷಿ ಸಚಿವರ ಗಮನಕ್ಕೂ ತಂದಿತ್ತು.

ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಹೆಸರುಕಾಳು ಮತ್ತು ಉದ್ದು ಬೆಳೆಯನ್ನು ಕೇಂದ್ರ ಸರ್ಕಾರವು ನಿಗದಿಪಡಿಸಿರುವ ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ ರಾಜ್ಯದ ನಾನಾ ಭಾಗಗಳಲ್ಲಿ 36,390 ಮೆಟ್ರಿಕ್ ಟನ್ ಹೆಸರು ಹಾಗೂ 9245 ಮೆಟ್ರಿಕ್ ಟನ್ ಉದ್ದು ರೈತರಿಂದ ಖರೀದಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಇನ್ನೂ ಸರ್ಕಾರದ ಆದೇಶದಂತೆ ಧಾರವಾಡ ಜಿಲ್ಲೆಯಾದ್ಯಂತ ಕಳೆದ ಬಾರಿಯಂತೆ ಈ ಸಾಲಿನಲ್ಲೂ ಹೆಸರು ಮತ್ತು ಉದ್ದು ಖರೀದಿ ಕೇಂದ್ರಗಳನ್ನು ತೆರೆಯಲು ಸೂಚಿಸಲಾಗಿದೆ ಎಂದೂ ಹೇಳಿದ್ದಾರೆ. ನಾಫೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ (ಮಾರ್ಕ್ಫೆಡ್) ಮತ್ತು ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ನೇಮಿಸಿದೆ.

ರಾಜ್ಯಸರಕಾರವು ನಿಗದಿಪಡಿಸಿದ ದಿನಾಂಕದಿಂದ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ ಎಂದು ವಿವರಿಸಿದ್ದಾರೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಬೇಕು. ಗುಣಮಟ್ಟದ ಹೆಸರು ಮತ್ತು ಉದ್ದು ಕಾಳನ್ನು ಖರೀದಿಸತಕ್ಕದ್ದು ಎಂದು ತಿಳಿಸಿದ್ದಾರೆ. ವಿವರಗಳನ್ನು ಬೆಂಬಲ ಬೆಲೆ ಯೋಜನೆಯಡಿ ನೋಂದಣಿ ಮಾಡಲು ಸಿದ್ದಪಡಿಸಿದ ತತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತಿದ್ದು, ಇದು ಪಬ್ಲಿಕ್ ನೆಕ್ಸ್ಟ್ ಮಾಧ್ಯಮದ ಬಿಗ್ ಇಂಪ್ಯಾಕ್ಟ್ ಆಗಿದೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

30/08/2022 07:20 pm

Cinque Terre

50.68 K

Cinque Terre

2

ಸಂಬಂಧಿತ ಸುದ್ದಿ