ಹುಬ್ಬಳ್ಳಿ: ರೈಲ್ವೆ ಖಾಸಗೀಕರಣ ವಿರೋಧಿಸಿ ಹಾಗೂ ಹುಬ್ಬಳ್ಳಿ-ಬೆಂಗಳೂರು ನಡುವೆ ಪ್ಯಾಸೆಂಜರ್ ರೈಲುಗಳನ್ನು ಮೊದಲಿನಂತೆಯೇ ಯಥಾಸ್ಥಿತಿ ಮುಂದುವರೆಸುವಂತೆ ಆಗ್ರಹಿಸಿ ರೈಲ್ವೆ ಖಾಸಗೀಕರಣ ವಿರೋಧಿ ಅಭಿಯಾನ ಕರ್ನಾಟಕ ಘಟಕದ ವತಿಯಿಂದ ಹುಬ್ಬಳ್ಳಿಯ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರದ ಮಹತ್ವಪೂರ್ಣ ಯೋಜನೆಯಲ್ಲಿ ಒಂದಾಗಿರುವ ರೈಲ್ವೆ ಸೇವೆಯನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅಲ್ಲದೇ ಆನ್ ಲಾಕ್ ಆಗಿದ್ದು,ಕೂಡಲೇ ಹುಬ್ಬಳ್ಳಿ-ಬೆಂಗಳೂರು ನಡುವಿನ ರೈಲ್ವೆ ಪ್ರಯಾಣವನ್ನು ಮೊದಲಿನಂತೆಯೇ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕೆಂದು ಒತ್ತಾಯಿಸಿದರು.
Kshetra Samachara
12/11/2020 03:38 pm