ರಾಜ್ಯದ 22 ಜಿಲ್ಲೆಗಳಿಗೆ ಪ್ರಮುಖ ಕಚೇರಿಯಾದ ಧಾರವಾಡದ ಕರ್ನಾಟಕ ನಿರಾವರಿ ನಿಗಮದಲ್ಲಿ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆದಿದ್ದು, ಈ ಕಚೇರಿಯನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ರೈತ ಸೇನಾ ಕರ್ನಾಟಕದ ರೈತ ಮುಖಂಡರು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಕಳಸಾ, ಬಂಡೂರಿ ನಾಲಾ ಜೋಡಣೆ ಯೋಜನೆಗೆ ಅನುಮೋದನೆ ಸಿಕ್ಕರೂ ಇದುವರೆಗೂ ನಮಗೆ ನೀರು ಕೊಡಿಸುವಲ್ಲಿ ಅಧಿಕಾರಿಗಳು ಮತ್ತು ಸರ್ಕಾರ ವಿಫಲವಾಗಿವೆ. ಈ ನಿಗಮದಲ್ಲಿ ಆದ ಭ್ರಷ್ಟಾಚಾರದ ಕುರಿತ ದಾಖಲೆಪತ್ರಗಳನ್ನು ಗದಗ ಜಿಲ್ಲಾಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗಿದೆ. ರಾಜ್ಯಪಾಲರನ್ನೂ ಭೇಟಿ ಮಾಡಿ ನಿಗಮದಲ್ಲಿನ ಭ್ರಷ್ಟಾಚಾರದ ಕುರಿತು ಅವರ ಗಮನಕ್ಕೆ ತಂದು, ಹತ್ತು ದಿನಗಳ ಒಳಗಾಗಿ ಈ ನಿಗಮದ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದೆವು. ಇದುವರೆಗೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ರೈತರು ಆರೋಪಿಸಿದರು.
ಈ ನಿಗಮದ ಮೇಲೆ ತನಿಖೆಗೆ ಆದೇಶ ನೀಡುವವರೆಗೂ ನಿಗಮದ ಮುಂದೆಯೇ ಧರಣಿ ನಡೆಸುವುದಾಗಿ ರೈತ ಮುಖಂಡರು ತಿಳಿಸಿದ್ದು, ಇಂದಿನಿಂದ ಧರಣಿ ಸಹ ಕುಳಿತಿದ್ದಾರೆ. ಧರಣಿಯಲ್ಲಿ ರೈತ ಮಹಿಳೆಯರು ಸಹ ಪಾಲ್ಗೊಂಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
21/06/2022 07:03 pm