ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಹೆಸರಲ್ಲಿ ಬೇಕಾಬಿಟ್ಟಿಯಾಗಿ ಕೆಲಸ ಮಾಡಿದ್ದ ಸ್ಮಾರ್ಟ್ ಸಿಟಿ ಇಲಾಖೆ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ಎಚ್ಚೆತ್ತುಕೊಂಡ ತಕ್ಷಣವೇ ಕಾಮಗಾರಿ ಕೈಗೆತ್ತಿಕೊಂಡು ಸಮಸ್ಯೆ ಸರಿಪಡಿಸಲು ಮುಂದಾಗಿದ್ದು, ಪಬ್ಲಿಕ್ ನೆಕ್ಸ್ಟ್ ಮಾಧ್ಯಮ ವರದಿಯ ಬಿಗ್ ಇಂಪ್ಯಾಕ್ಟ್ ಆಗಿದೆ.
ಹೌದು.. ಮೊನ್ನೆಯಷ್ಟೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿಯ ಮೂರುಸಾವಿರಮಠ ಆವರಣದಲ್ಲಿರುವ ಪೇವರ್ಸ್ ಜೋಡಣೆ ಅವ್ಯವಸ್ಥೆ ಹಾಗೂ ಕಳಪೆ ಕಾಮಗಾರಿ ವಿಸ್ತೃತ ವರದಿಯನ್ನು ಮಾಡಿತ್ತು. ಈ ಬಗ್ಗೆ ವರದಿ ಬಿತ್ತರಿಸಿದ ಬೆನ್ನಲ್ಲೇ ಸ್ಮಾರ್ಟ್ ಸಿಟಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಮಗಾರಿ ಸರಿಪಡಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.
ಒಳಗೆ ಹುಳುಕು ಮೇಲೆ ಬೆಳಕು ಎಂಬ ಶೀರ್ಷಿಕೆ ಅಡಿಯಲ್ಲಿ ಪ್ರಸಾರಗೊಂಡ ವರದಿಯು ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕರಿಗೆ ಬಿಸಿ ಮುಟ್ಟಿಸಿದ್ದು, ತಕ್ಷಣವೇ ಕಾರ್ಯಪ್ರವೃತ್ತರಾದ ಅಧಿಕಾರಿಗಳು ಕಳಪೆ ಕಾಮಗಾರಿ ಸರಿಪಡಿಸಲು ಮುಂದಾಗಿದ್ದಾರೆ.
ಒಟ್ಟಿನಲ್ಲಿ ಮಾಡುವ ಕೆಲಸ ಅಚ್ಚುಕಟ್ಟಾಗಿ ಮಾಡಿದ್ದರೆ ಈ ಸಮಸ್ಯೆಯೇ ಬರುತ್ತಿರಲಿಲ್ಲ. ಕೋಟ್ಯಾಂತರ ರೂಪಾಯಿ ಹಣವನ್ನು ಹೊಳೆಯಲ್ಲಿ ಹೋಮ ಮಾಡುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಇನ್ನಾದರೂ ಇಂತಹ ವ್ಯವಸ್ಥೆಗೆ ಬ್ರೇಕ್ ಹಾಕುವ ಕಾರ್ಯವನ್ನು ಮಾಡಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
27/08/2022 02:17 pm