ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಬ್ಲಿಕ್ ನೆಕ್ಸ್ಟ್ ವರದಿಗೆ ಎಚ್ಚೆತ್ತುಕೊಂಡು, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಟ್ಟ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಯಿಂದಾಗಿ ಈಗ ಸಾರ್ವಜನಿಕರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವಂತ ಪರಿಸ್ಥಿತಿ ಎದುರಾಗಿದೆ. ಅದೇ ರೀತಿ ಹುಬ್ಬಳ್ಳಿ ರೈಲ್ವೆ ಸ್ಟೇಷನ್ ರಸ್ತೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿದ್ದು, ಕೆಲವೊಂದು ಕಾರಣಗಳಿಂದ ಕುಂಠಿತಗೊಳ್ಳತ್ತಿತ್ತು.

ಈ ಸಮಸ್ಯೆ ಬಗ್ಗೆ ನಮ್ಮ ಪಬ್ಲಿಕ್ ನೆಕ್ಸ್ಟ್ ಕುಂಠಿತಗೊಳ್ಳುತ್ತಿದೆ ಸ್ಮಾರ್ಟ್ ಸಿಟಿ ವ್ಯವಸ್ಥೆ! ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುತ್ತಿದ್ದಾರೆ ಜನರು ಎಂಬ ಶೀರ್ಷಿಕೆಯಲ್ಲಿ ಸುದ್ದಿಯನ್ನು ಬಿತ್ತರಿಸಿತ್ತು. ಸುದ್ದಿ ನೋಡಿದ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಅಧಿಕಾರಿಗಳು ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಲ್ಪಿಸಿದ್ದಾರೆ.

ಸ್ಮಾರ್ಟ್ ಸಿಟಿ ಅಡಿಯಲ್ಲಿ ರೈಲ್ವೆ ಸ್ಟೇಷನ್ ರಸ್ತೆಯ ಮಾರ್ಗದಲ್ಲಿ ಚರಂಡಿ ಕಾಮಗಾರಿ ನಡೆದಿತ್ತು. ಕೆಲವೊಂದು ಭಾಗದಲ್ಲಿ ಹಾಗೆಯೇ ಬಿಟ್ಟಿದ್ದರು. ಇದರಿಂದಾಗಿ ಪಾದಚಾರಿಗಳು ಆಯತಪ್ಪಿ ಬಿದ್ದಿದ್ದು ಉಂಟು.

ಇಂತಹ ಸಂದರ್ಭದಲ್ಲಿ ನಿಮ್ಮ ಪಬ್ಲಿಕ್ ನೆಕ್ಸ್ಟ್ ಈ ಸಮಸ್ಯೆ ಬಗ್ಗೆ ವರದಿಯನ್ನು ಮಾಡಿದ ನಂತರ ತಾತ್ಕಾಲಿಕವಾಗಿ ಖಾಲಿಬಿಟ್ಟ ಜಾಗದಲ್ಲಿ ಯಾವುದೇ ಅನಾಹುತ ಆಗಬಾರದೆಂದು ಬ್ಯಾರಿಕೇಡ್ ತಗಡಿನ ಶೀಟ್ ಹಾಕಿ ಸುರಕ್ಷತೆ ಮಾಡಿದ್ದಾರೆ.

ಒಟ್ಟಿನಲ್ಲಿ ಕುಂಠಿತಗೊಳ್ಳುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಜನಪ್ರತಿನಿಧಿಗಳು ಮತ್ತು ಸಂಬಂಧಿಸಿದ ಅಧಿಕಾರಿಗಳು, ಆದಷ್ಯ ಬೇಗ ಮುಗಿಸಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.

ಈರಣ್ಣ ವಾಲಿಕಾರ

ಪಬ್ಲಿಕ್ ನೆಕ್ಸ್ಟ್

Edited By : Manjunath H D
Kshetra Samachara

Kshetra Samachara

05/01/2021 03:58 pm

Cinque Terre

38.71 K

Cinque Terre

5

ಸಂಬಂಧಿತ ಸುದ್ದಿ