ಹುಬ್ಬಳ್ಳಿ : 298 ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿ 63, 218 ಹಾಗೂ 4 ನ್ನು ಸಂಪರ್ಕಿಸುವ 3.6 ಕೀ.ಮೀ ಉದ್ದದ ಚೆನ್ನಮ್ಮ ವೃತ್ತದ ಮೇಲು ರಸ್ತೆ, 25 ಕೋಟಿ ವೆಚ್ಚದಲ್ಲಿ ಕಲಘಟಗಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ 2.77 ಕಿ.ಮೀ ಚತುಷ್ಪಥ ರಸ್ತೆ ಹಾಗೂ ದಾಸ್ತಿಕೊಪ್ಪದ ಬಳಿ ಸೇತುವೆ ನಿರ್ಮಾಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಕೇಂದ್ರದ ಸಾರಿಗೆ ಹಾಗೂ ಹೆದ್ದಾರಿ, ಅತಿ ಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆಗಳ ಸಚಿವ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ನಗರದ ಡೆನ್ನಿಸನ್ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ, ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ, ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ, ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ನಿವೃತ್ತಿ ಸೇನಾಧಿಕಾರಿ ಡಾ.ವಿ.ಕೆ.ಸಿಂಗ್, ರಾಜ್ಯ ಸರ್ಕಾರದ ಉಪಮುಖ್ಯ ಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಗೋವಿಂದ ಎಂ ಕಾರಜೋಳ, ಬೃಹತ್ ಮಧ್ಯಮ ಕೈಗಾರಿಕೆ ಸಚಿವ, ಸಾರ್ವಜನಿಕ ಉದ್ದಿಮೆ ಜಿಲ್ಲಾ ಉಸ್ತವಾರಿ ಸಚಿವ ಜಗದೀಶ್ ಶೆಟ್ಟರ್, ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರುಗಳಾದ ಸಿ.ಎಂ.ನಿಂಬಣ್ಣವರ, ಅಬ್ಬಯ್ಯ ಪ್ರಸಾದ್, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಬಸವರಾಜ ಹೊರಟ್ಟಿ, ಭಾಗವಹಿಸಿದ್ದರು.
Kshetra Samachara
15/01/2021 12:38 pm