ಹುಬ್ಬಳ್ಳಿ: ಕೋವಿಡ್‌ನಿಂದ ವಾ.ಕ.ರಾ.ರ.ಸಾ ಸಂಸ್ಥೆಯ ವ್ಯಾಪ್ತಿಯಲ್ಲಿ ವಿರಳ ಜನಸಂದಣಿಯಿಂದಾಗಿ ಕೆಲವು ಗ್ರಾಮೀಣ ಪ್ರದೇಶಗಳಲ್ಲಿ ಸಾರಿಗೆ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿರಲಿಲ್ಲ. ಪ್ರಸಕ್ತವಾಗಿ ಹಂತ ಹಂತವಾಗಿ ಶಾಲಾ ಕಾಲೇಜುಗಳು ಪ್ರಾರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ನಿಯಮಿತವಾಗಿ ತರಗತಿಗಳಿಗೆ ಹಾಜರಾಗಲು ಅನುಕೂಲವಾಗುವಂತೆ ಸಮರ್ಪಕ ಸಾರಿಗೆ ಸೌಲಭ್ಯ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ.
ಎಲ್ಲ ಘಟಕ ವ್ಯವಸ್ಥಾಪಕರುಗಳಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸೂಕ್ತ ಸಮರ್ಪಕ ಸಾರಿಗೆ ಸೇವೆಯನ್ನು ಒದಗಿಸುವಂತೆ ಕಟ್ಟು ನಿಟ್ಟಿನ ಸೂಚನೆ ನೀಡುವದರೊಂದಿಗೆ ಯಾವುದೇ ರೀತಿಯ ದೂರುಗಳಿಗೆ ಆಸ್ಪದ ನೀಡದಂತೆ ಕ್ರಮ ವಹಿಸಲು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ ಎಂದು ವಾ.ಕ.ರ.ಸಾ. ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Kshetra Samachara
28/09/2021 10:39 pm