ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇ-ಶ್ರಮ್ ತಂತ್ರಾಂಶದ ಮೂಲಕ ಅಸಂಘಟಿತ ಕಾರ್ಮಿಕರ‌ ಮಾಹಿತಿ ಸಂಗ್ರಹಿಸಿ: ಕರಾಳೆ

ಹುಬ್ಬಳ್ಳಿ: ಕೇಂದ್ರ ಸರಕಾರವು ಕಾರ್ಮಿಕರ ಸಮಗ್ರ ರಾಷ್ಟ್ರೀಯ ದತ್ತಾಂಶ ಸಂಗ್ರಹಿಸಲು ಇ-ಶ್ರಮ್ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಿದೆ. ಈ ತಂತ್ರಾಂಶ ಬಳಸಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಅಸಂಘಟಿತ ಕಾರ್ಮಿಕ ಮಾಹಿತಿ ಸಂಗ್ರಹಿಸುವ ಕಾರ್ಯವಾಗಬೇಕೆಂದು ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹೇಳಿದರು.

ಸರ್ವೋಚ್ಛ ನ್ಯಾಯಾಲಯದ ನಿರ್ದೇಶನದಂತೆ ಇ-ಶ್ರಮ್ ಮಾಹಿತಿ ಸಂಗ್ರಹಣೆಗೆ ಜಿಲ್ಲಾ ಮಟ್ಟದಲ್ಲಿ ಜಾರಿ ಸಮಿತಿ ರಚಿಸಲಾಗಿದೆ. ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತೆಯ ನಿಟ್ಟಿನಲ್ಲಿ ಪ್ರಸ್ತುತ ಚಾಲಿತ ಗೊಂಡಿರುವ ಇ-ಶ್ರಮ್ ತಂತ್ರಾಂಶವು ಅಸಂಘಟಿತ ಕಾರ್ಮಿಕರ ಸಮಗ್ರ ರಾಷ್ಟ್ರೀಯ ಡಾಟಾಬೇಸ್ ಸಂಗ್ರಹಿಸಲಿದೆ. ಇದರಲ್ಲಿ ಕಾರ್ಮಿಕ ಸಂಘಟನೆಗಳು ನೊಂದಣಿ ಮಾಡಿಕೊಳ್ಳಬೇಕು. ಸಮಾಜದ ವಿವಿಧ ಸ್ತರಗಳಲ್ಲಿ ಅಸಂಘಟಿತರಾಗದೇ ಉಳಿದಿರುವ ಕಾರ್ಮಿಕರ ಸಬಲೀಕರಣಕ್ಕಾಗಿ ವಿವಿಧ ಇಲಾಖೆಗಳು ಸಮನ್ವಯತೆ ಸಾಧಿಸಿ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

Edited By :
Kshetra Samachara

Kshetra Samachara

26/11/2021 06:41 pm

Cinque Terre

12.47 K

Cinque Terre

0

ಸಂಬಂಧಿತ ಸುದ್ದಿ