ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ : ಫೆ. 19 ರಂದು ತಾಲೂಕಿನ ಖನ್ನೂರ ಗ್ರಾಮದಲ್ಲಿ ಗ್ರಾಮವಾಸ್ತವ್ಯ

ನವಲಗುಂದ : ಫೆ. 19 ರಂದು ನವಲಗುಂದ ತಾಲೂಕಿನಲ್ಲಿ ತಹಶೀಲ್ದಾರ್ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಗ್ರಾಮವಾಸ್ತವ್ಯ ಹಿನ್ನೆಲೆ ತಾಲೂಕಿನ ನಾಯಕನೂರ ಗ್ರಾಮ ಪಂಚಾಯತ್ ವ್ಯಾಪ್ತಿಯ ಖನ್ನೂರ ಗ್ರಾಮದಲ್ಲಿ ತಹಶೀಲ್ದಾರ ಪ್ರವೀಣ ಹುಚ್ಚನ್ನವರ ಗ್ರಾಮವಾಸ್ತವ್ಯ ಮಾಡಲಿದ್ದಾರೆ.

ಇನ್ನು ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಇಲ್ಲಿಯವರೆಗೆ ಆಯಾ ಗ್ರಾಮ ವಾಸ್ತವ್ಯದ ಗ್ರಾಮ ವ್ಯಾಪ್ತಿಯ ಸಾರ್ವಜನಿಕರು ಸಲ್ಲಿಸಿರುವ ಮನವಿ, ಕುಂದು ಕೊರತೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸುವರು.

ಸರ್ಕಾರದ ಆಶಯದಂತೆ ಗ್ರಾಮದ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂಧಿಸಿ, ಸ್ಥಾನಿಕವಾಗಿಯೇ ಸಾಧ್ಯವಾದಷ್ಟು ಸಮಸ್ಯೆಗಳನ್ನು ಪರಿಹರಿಸಿ, ಕ್ರಮ ಕೈಗೊಳ್ಳಲು ಎಲ್ಲ ಇಲಾಖೆಯ ಅಧಿಕಾರಿ ಮತ್ತು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

18/02/2022 10:07 am

Cinque Terre

3.75 K

Cinque Terre

1

ಸಂಬಂಧಿತ ಸುದ್ದಿ