ಧಾರವಾಡ: ಧಾರವಾಡ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಫೆ.19 ರಂದು ಧಾರವಾಡ ತಹಶೀಲ್ದಾರ ಡಾ. ಸಂತೋಷ ಬಿರಾದಾರ ಅವರು ತಾಲೂಕಿನ ರಾಮಾಪೂರ ಗ್ರಾಮದಲ್ಲಿ, ಹುಬ್ಬಳ್ಳಿ ನಗರ ತಹಶೀಲ್ದಾರ ಶಶಿಧರ ಮಾಡ್ಯಾಳ ಅವರು ಅಮರಗೋಳ ಗ್ರಾಮದಲ್ಲಿ, ಹುಬ್ಬಳ್ಳಿ ಗ್ರಾಮೀಣ ತಹಶೀಲ್ದಾರ ಪ್ರಕಾಶ ನಾಶಿ ಅವರು ತಾಲೂಕಿನ ನಾಗರಳ್ಳಿ ಗ್ರಾಮದಲ್ಲಿ, ಕುಂದಗೋಳ ತಹಶೀಲ್ದಾರ ಅಶೋಕ ಶಿಗ್ಗಾಂವಿ ಅವರು ತಾಲೂಕಿನ ಬೆಣಕನಹಳ್ಳಿ ಗ್ರಾಮದಲ್ಲಿ, ನವಲಗುಂದ ತಹಶೀಲ್ದಾರ ನವೀನ ಹುಲ್ಲೂರ ಅವರು ತಾಲೂಕಿನ ಬನ್ನೂರು ಗ್ರಾಮದಲ್ಲಿ, ಅಣ್ಣಿಗೇರಿ ತಹಶೀಲ್ದಾರ ಮಂಜುನಾಥ ಅಮಾಸಿ ಅವರು ತಾಲೂಕಿನ ಸಾಸಿವೆಹಳ್ಳಿ ಗ್ರಾಮದಲ್ಲಿ, ಕಲಘಟಗಿ ತಹಶೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ ಅವರು ತಾಲೂಕಿನ ಕಂದ್ಲಿ ಗ್ರಾಮದಲ್ಲಿ ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ.
ಅಳ್ನಾವರ ತಾಲೂಕಿನ ತಹಶೀಲ್ದಾರ ಅಮರೇಶ್ ಪಮ್ಮಾರ ಅವರು ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯದ ಅರವಟಗಿ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಎಲ್ಲ ತಾಲೂಕಿನ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ವಿವಿಧ ಸರ್ಕಾರಿ ಯೋಜನೆಗಳ ಮಾಹಿತಿ ಹಾಗೂ ಇಲ್ಲಿಯವರೆಗೆ ಆಯಾ ಗ್ರಾಮ ವಾಸ್ತವ್ಯದ ಗ್ರಾಮ ವ್ಯಾಪ್ತಿಯ ಸಾರ್ವಜನಿಕರು ಸಲ್ಲಿಸಿರುವ ಮನವಿ, ಕುಂದು ಕೊರತೆಗಳ ಕುರಿತು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿಯೊಂದಿಗೆ ಕಡ್ಡಾಯವಾಗಿ ಭಾಗವಹಿಸಬೇಕು. ಸರ್ಕಾರದ ಆಶಯದಂತೆ ಗ್ರಾಮದ ಸಾರ್ವಜನಿಕರಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಸ್ಥಾನಿಕವಾಗಿಯೇ ಸಾಧ್ಯವಾದಷ್ಟು ಸಮಸ್ಯೆಗಳನ್ನು ಪರಿಹರಿಸಿ ಕ್ರಮ ಕೈಗೊಳ್ಳಲು ಎಲ್ಲ ಇಲಾಖೆಯ ಅಧಿಕಾರಿ ಮತ್ತು ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಸೂಚಿಸಿದ್ದಾರೆ.
Kshetra Samachara
18/02/2022 12:01 pm