ಕುಂದಗೋಳ: ತಾಲೂಕಿನ ಅಲ್ಲಾಪೂರ ಗ್ರಾಮದ ಜಲ ಜೀವನ್ ಮಿಷನ್ ಕಾಮಗಾರಿಯನ್ನು ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಕಾಮಗಾರಿ ಪ್ರಗತಿಯನ್ನು ವೀಕ್ಷಿಸಿದರು.
ಅಲ್ಲಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 24 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ 200ಕ್ಕೂ ಅಧಿಕ ನಲ್ಲಿಗಳ ಸಂಪರ್ಕ ಕಾಮಗಾರಿಯನ್ನು ಜಲ ಜೀವನ್ ಮಿಷನ್ ಅಭಿವೃದ್ಧಿ ಅಧಿಕಾರಿ ಆಕಾಶ್.ವಿ ವೀಕ್ಷಣೆ ನಡೆಸಿದರು. ಬಳಿಕ ಶೀಘ್ರದಲ್ಲೇ ಕಾಮಗಾರಿ ಮುಕ್ತಾಯ ಮಾಡಬೇಕು. ಎಲ್ಲಾ ನಲ್ಲಿಗಳಿಗೂ ಮೀಟರ್ ಸಂಪರ್ಕ ಪರೀಕ್ಷೆ ನಡೆಸುವಂತೆ ತಿಳಿಸಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಸರಿಯಾಗಿ ಮಾಡುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯ ಮಲ್ಲಿಕಾರ್ಜುನ ಗ್ರಾಮದಲ್ಲಿ ಅಳವಡಿಸಲಾದ ಜಲ ಜೀವನ್ ಮಿಷನ್ ಸಂಪರ್ಕವನ್ನು ಅಧಿಕಾರಿಗಳು ಗಮನಕ್ಕೆ ತಂದರು.
Kshetra Samachara
19/02/2022 09:30 am