ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಸಬ್ ರಿಜಿಸ್ಟ್ರಾರ್ ಕಚೇರಿಯ ಸಿಬ್ಬಂದಿಗೆ ಡಿಸಿ ಶಾಕ್, ಕ್ಲಾಸ್

ಧಾರವಾಡ: ಧಾರವಾಡದ ಸಬ್‌ ರಿಜಿಸ್ಟ್ರಾರ್ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳು ಸರಿಯಾಗಿ ಆಗುತ್ತಿಲ್ಲ. ವಿನಾಕಾರಣ ವಿಳಂಬ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿರುವ ಕಚೇರಿಗೆ ಎಂಟ್ರಿ ಕೊಟ್ಟ ಜಿಲ್ಲಾಧಿಕಾರಿಗಳು, ಅಲ್ಲಿನ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಕಾರ್ಯವಿಧಾನಗಳ ವಿವರ ಪಡೆದರು. ಈ ವೇಳೆ ಸಾರ್ವಜನಿಕರನ್ನು ಭೇಟಿ ಮಾಡಿದ ಅವರು, ನಾನು ಧಾರವಾಡ ಜಿಲ್ಲಾಧಿಕಾರಿ.. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಏನಾದರೂ ತೊಂದರೆಯಾಗುತ್ತಿದೆಯೇ? ಎಂದು ಸಮಸ್ಯೆಗಳನ್ನು ಆಲಿಸಿದರು.

Edited By : Shivu K
Kshetra Samachara

Kshetra Samachara

24/02/2022 02:35 pm

Cinque Terre

24.12 K

Cinque Terre

14

ಸಂಬಂಧಿತ ಸುದ್ದಿ