ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಜ್ಯದ 205 ದೇವಸ್ಥಾನಗಳ ಅಭಿವೃದ್ಧಿ: ಸಚಿವೆ ಜೊಲ್ಲೆ

ರಾಜ್ಯದ 205 ದೇವಸ್ಥಾನಗಳನ್ನು ದೈವ ಸಂಕಲ್ಪ ಯೋಜನೆಯಡಿಯಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಮುಜರಾಯಿ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎ ಗ್ರೇಡ್‌ನಲ್ಲಿ 25, ಬಿ ಗ್ರೇಡ್‌ನಲ್ಲಿ 139 ದೇವಸ್ಥಾನಗಳ ಅಭಿವೃದ್ಧಿ ಮಾಡಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಲಸ ಮಾಡಲಾಗುವುದು ಎಂದರು.

1140 ಕೋಟಿ ವೆಚ್ಚದಲ್ಲಿ ಸದ್ಯ 25 ದೇವಸ್ಥಾನಗಳ ಅಭಿವೃದ್ಧಿಗೆ ಮಾಸ್ಟರ್ ಪ್ಲ್ಯಾನ್ ಮಾಡಲಾಗುತ್ತಿದೆ. ಆದಷ್ಟು ಬೇಗ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಟೆಂಪಲ್ ಟೂರಿಸಂ ಎಂಬ ವ್ಯವಸ್ಥೆ ಮಾಡಲಾಗುವುದು. ದೈವ ಸಂಕಲ್ಪ ಕೆಲವೇ ದಿನಗಳಲ್ಲಿ ಕಾರ್ಯ ರೂಪಕ್ಕೆ ಬರಲಿದೆ ಎಂದರು.

ದೇವಸ್ಥಾನ ಮತ್ತು ವಕ್ಫ ಆಸ್ತಿಗಳನ್ನು ಡ್ರೋಣ್ ಮೂಲಕ ಸರ್ವೇ ಮಾಡಲಾಗುತ್ತದೆ. ಈಗಾಗಲೇ ಇದನ್ನು ಕಂದಾಯ ಸಚಿವ ಆರ್.ಅಶೋಕ ಅವರ ಗಮನಕ್ಕೆ ತರಲಾಗಿದೆ. ಯಾವುದೇ ದೇವಸ್ಥಾನಗಳ ಜಾಗವನ್ನು ಒತ್ತುವರಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದರು.

Edited By :
Kshetra Samachara

Kshetra Samachara

06/03/2022 03:10 pm

Cinque Terre

31.04 K

Cinque Terre

7

ಸಂಬಂಧಿತ ಸುದ್ದಿ