ಸ್ಮಾರ್ಟ್ ಸಿಟಿ ಹಾಗೂ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಕಷ್ಟು ಕಷ್ಟ ಅನುಭವಿಸುತ್ತಿದ್ದು, ಈ ನಿಟ್ಟಿನಲ್ಲಿ ಕೂಡಲೇ ಕಾಮಗಾರಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಹೌದು.. ಇಂದು ಬೆಳ್ಳಂಬೆಳಿಗ್ಗೆ ಹೊಸೂರು ಸೇರಿದಂತೆ ಬಹುತೇಕ ಕಡೆಗಳಲ್ಲಿ ಸ್ಮಾರ್ಟ್ ಸಿಟಿ ಹಾಗೂ ಸಿಆರ್ ಎಫ್ ಅನುದಾದ ಅಡಿಯಲ್ಲಿ ನಿರ್ಮಾಣ ಮಾಡುತ್ತಿರುವ ರಸ್ತೆ ಹಾಗೂ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ ವೇಳೆ ಕಾಮಗಾರಿ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಂಡು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ನೀಡಲು ಸೂಚನೆ ನೀಡಿದರು.
ಇನ್ನೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರಿಗೆ ಸಾರ್ವಜನಿಕರು ತಮ್ಮ ಸಮಸ್ಯೆಯ ಕುರಿತು ಹಾಗೂ ಅನುಭವಿಸುವ ಸಂಕಷ್ಟದ ಕುರಿತು ಮನವರಿಕೆ ಮಾಡಿದರು. ಸಮಸ್ಯೆಗಳನ್ನು ಆಲಿಸಿದ ಜಿಲ್ಲಾಧಿಕಾರಿ ಕೂಡಲೇ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
11/03/2022 11:59 am