ಪಬ್ಲಿಕ್ ನೆಕ್ಸ್ಟ್ ಬಿಗ್ ಇಂಪ್ಯಾಕ್ಟ್
ವರದಿ: ಮಲ್ಲೇಶ ಸೂರಣಗಿ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಹಾಗೂ ತ್ಯಾಜ್ಯವನ್ನು ಬೇಕಾಬಿಟ್ಟಿಯಾಗಿ ದಹಿಸುವ ಕುರಿತು ʼಪಬ್ಲಿಕ್ ನೆಕ್ಸ್ಟ್ʼ ನಡೆಸಿದ ಅಭಿಯಾನದಿಂದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಕಸ ದಹಿಸುವವರ ವಿರುದ್ಧ ಕ್ರಮ ಜರುಗಿಸಿದ್ದಾರೆ.
ಹೌದು, ತ್ಯಾಜ್ಯ ವಿಲೇವಾರಿಗಾಗಿ ಕೋಟ್ಯಂತರ ರೂ. ವ್ಯಯ ಮಾಡುತ್ತಿದ್ದ ಪಾಲಿಕೆ, ಸೂಕ್ತ ರೀತಿ ತ್ಯಾಜ್ಯ ನಿರ್ವಹಣೆ ಮಾಡದೆ ಡಂಪಿಂಗ್ ಯಾರ್ಡ್ ಗಳಲ್ಲಿ ಬೆಂಕಿ ಹಚ್ಚುವ ಕಾರ್ಯ ನಡೆಸಿತ್ತು. ಅಲ್ಲದೆ, ಎಲ್ಲೆಂದರಲ್ಲಿ ಕಸವನ್ನು ಸುಡುವ ಕಾರ್ಯಕ್ಕೆ ಮುಂದಾಗಿರುವವರ ವಿರುದ್ಧ ʼಪಬ್ಲಿಕ್ ನೆಕ್ಸ್ಟ್ʼ ಅಭಿಯಾನದ ನಂತರ ಅಧಿಕಾರಿಗಳು ಎಚ್ಚೆತ್ತಿದ್ಸಾರೆ.
ಇನ್ನು, ರಸ್ತೆ ಪಕ್ಕದ ಕಸಕ್ಕೆ ಬೆಂಕಿ ಹಚ್ಚಿದವರಿಗೆ ಹುಬ್ಬಳ್ಳಿಯಲ್ಲಿ ಪಾಲಿಕೆ ದಂಡ ವಿಧಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಿಂದ ಜಯನಗರ ಹತ್ತಿರ ಕಸಕ್ಕೆ ಬೆಂಕಿ ಹಚ್ಚಿದ ನಿವಾಸಿಗಳಿಗೆ 5000 ರೂ. ದಂಡ ವಿಧಿಸಲಾಯಿತು. ವಲಯ ಸಹಾಯಕ ಆಯುಕ್ತರು, ಅರೋಗ್ಯ ನಿರೀಕ್ಷಕರು ಮತ್ತು ವಾರ್ಡ್ ಜಮಾದಾರರು ಕಸಕ್ಕೆ ಬೆಂಕಿ ಹಚ್ಚಿದವರಿಗೆ ದಂಡದ ಬಿಸಿ ಮುಟ್ಟಿಸಿದ್ದಾರೆ. ಯಾರೇ ಈ ರೀತಿ ಮಾಡಿದರೂ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವ ಭರವಸೆಯನ್ನು ಪಾಲಿಕೆ ಆಯುಕ್ತರು ನೀಡಿದ್ದಾರೆ.
ಒಟ್ಟಿನಲ್ಲಿ ಬಹುದೊಡ್ಡ ಅವ್ಯವಸ್ಥೆಯನ್ನು ಸರಿಪಡಿಸುವ ಹಾಗೂ ಅಧಿಕಾರಿಗಳನ್ನು ಎಚ್ಚರಿಸುವ ಕಾರ್ಯವನ್ನು ನಿಮ್ಮ ʼಪಬ್ಲಿಕ್ ನೆಕ್ಸ್ಟ್ʼ ಮಾಡಿದೆ. ಸಾರ್ವಜನಿಕ ಹಣವನ್ನು ಬೇಕಾಬಿಟ್ಟಿಯಾಗಿ ಪೋಲು ಮಾಡುತ್ತಿರುವುದಕ್ಕೆ ಬ್ರೇಕ್ ಹಾಕಿದೆ.
Kshetra Samachara
19/03/2022 11:59 am