ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಕ್ಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ: ಜಿಲ್ಲಾಧಿಕಾರಿಗಳಿಗೆ ಭವ್ಯ ಸ್ವಾಗತ

ಹುಬ್ಬಳ್ಳಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಕಲಘಟಗಿ ತಾಲೂಕಿನ ಮುಕ್ಕಲ್ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕೈಗೊಳ್ಳಲು ಆಗಮಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಗ್ರಾಮಸ್ಥರು ಭವ್ಯ ಸ್ವಾಗತಕೋರಿದರು.

ಮುಕ್ಕಲ್ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರ ಬಳಿ ನೆರೆದಿದ್ದ ಅಪಾರ ಜನಸ್ತೋಮ ಜಿಲ್ಲಾಧಿಕಾರಿಗಳು ಆಗಮಿಸಿದ ವೇಳೆ ಉದ್ಘೋಷಗಳನ್ನು ಕೂಗಿದರು. ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರು ಆರತಿ ಬೆಳಗಿದರು. ಗ್ರಾ.ಪಂ ಅಧ್ಯಕ್ಷ ಲಿಂಗರೆಡ್ಡಿ ಚೆನ್ನಪ್ಪ ನಡುವಿನಮನಿ ಜಿಲ್ಲಾಧಿಕಾರಿಗಳಿಗೆ ಮೈಸೂರು ಪೇಟ ತೊಡಿಸಿ ಗ್ರಾಮಕ್ಕೆ ಸ್ವಾಗತಿಸಿದರು. ಅಲಂಕೃತ ಚಕ್ಕಡಿ ಬಂಡಿ‌ ಏರಿದ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಡಾ.ಸುರೇಶ್ ಇಟ್ನಾಳ್ ಮೆರವಣಿಗೆ ಮೂಲಕ ಗ್ರಾಮ ಪ್ರವೇಶಿಸಿದರು.

ಮೆರವಣಿಗೆಯಲ್ಲಿ ವೇಷದಾರಿಗಳು, ಕಂಸಾಳೆ, ಡೊಳ್ಳು ಕುಣಿತ ಪ್ರದರ್ಶಿಸಿದರು. ಲಂಬಾಣಿ ಮಹಿಳೆಯರು ಸಾಂಪ್ರದಾಯಿಕ ಲಂಬಾಣಿ‌ ನೃತ್ಯ ಮೆರವಣಿಗೆ ಆಕರ್ಷಣೆಯಾಗಿತ್ತು. ಗ್ರಾಮದಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ಜಿಲ್ಲಾಧಿಕಾರಿ ಗ್ರಾಮದ ಅಧಿದೇವತೆ ಮಾರಮ್ಮನಿಗೆ ನಮಿಸಿ, ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ತೆರಳಿದರು. ಮಕ್ಕಲ್ ಗ್ರಾ.ಪಂ ವ್ಯಾಪ್ತಿ ಅಡಿಯಲ್ಲಿ ಮಕ್ಕಲ್, ಬಿದರಗಡ್ಡಿ, ಕಾಲ್ಸಾ ಹುಣಸಿಗಟ್ಟಿ ಗ್ರಾಮಗಳು ಬರುತ್ತವೆ. ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸಂಜೆಯವರೆಗೂ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮದ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ಸೂಚಿಸಲಿದ್ದಾರೆ.

Edited By : Nagaraj Tulugeri
Kshetra Samachara

Kshetra Samachara

21/03/2022 01:38 pm

Cinque Terre

23.39 K

Cinque Terre

1

ಸಂಬಂಧಿತ ಸುದ್ದಿ