ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸ್ಮಾರ್ಟ್ ಸಿಟಿ ಯೋಜನೆಯಡಿ ದೇಶದ ಮೊದಲ ಹಸಿರು ಸಂಚಾರಿ ಪಥ ಕಾಮಗಾರಿ:ಮಾಜಿ ಸಿಎಂ ಶೆಟ್ಟರ್

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಯೋಜನೆಯಡಿ 80 ಕೋಟಿ ರೂ. ವೆಚ್ಚದಲ್ಲಿ 9.2 ಕಿ.ಮೀ. ಉದ್ದದ ಹಸಿರು ಸಂಚಾರಿ ಪಥ( ಗ್ರೀನ್ ಮೋಬಿಲಿಟಿ ಕಾರಿಡಾರ್) ಕಾಮಗಾರಿಯು ದೇಶದ 100 ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಮೊದಲನೆಯದಾಗಿ ಅನುಷ್ಠಾನ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ 7.2 ಕೋಟಿ ವೆಚ್ಚದಲ್ಲಿ 640 ಮೀಟರ್ ಉದ್ದದ ನಾಲಾ‌ ಅಭಿವೃದ್ಧಿ ಹಾಗೂ ಸೈಕಲ್ ಪಾತ್ ನಿರ್ಮಾಣ ಮಾಡಲಾಗಿದೆ. ಮುಂದಿನ 15 ದಿನಗಳಲ್ಲಿ ಉದ್ಘಾಟನೆ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಲಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯ ಉಣಕಲ್ ನಾಲಾ ಹಿಂಭಾಗದ ಜಲಮಂಡಳಿ ಕಚೇರಿ, ಲಿಂಗರಾಜ ನಗರದ ಹತ್ತಿರ ಸ್ಮಾರ್ಟ್ ಸಿಟಿ ಯೋಜನೆಯ ಕೈಗೊಂಡಿರುವ ಹಸಿರುಪಥ (ಗ್ರೀನ್ ಮೋಬಿಲಿಟಿ) ನಿರ್ಮಾಣ ಕಾಮಗಾರಿಯನ್ನು ಫ್ರೆಂಚ್ ಅಭಿವೃದ್ಧಿ ಏಜೆನ್ಸಿಯ ನಿಯೋಗದ (AFD-Agence Franchise Development) ಸದಸ್ಯರೊಂದಿಗೆ ವೀಕ್ಷಿಸಿ ಮಾತನಾಡಿದರು.

ಫ್ರಾನ್ಸ್‌ದಿಂದ ಆಗಮಿಸಿರುವ ಸುಸ್ಥಿರ ನಗರಾಭಿವೃದ್ಧಿ ಕಾರ್ಯಗಳ ತಂಡದ ನಿಯೋಗವು ಹುಬ್ಬಳ್ಳಿ ಧಾರವಾಡ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಂಡಿರುವ ಹಸಿರು ಸಂಚಾರಿ ಪಥ( ಗ್ರೀನ್ ಮೋಬಿಲಿಟಿ ಕಾರಿಡಾರ್) ಕಾಮಗಾರಿಯು ವೀಕ್ಷಿಸುತ್ತಿದೆ. ಯುರೋಪ್ ಯುನಿಯನ್ ದೇಶಗಳಲ್ಲಿ ಕೈಗೊಂಡ ಕಾಮಗಾರಿಗಿಂತ ಭಿನ್ನವಾಗಿದೆ ಎಂದು ತಿಳಿಸಿದೆ. ನಾಲಾ ಪಕ್ಕದಲ್ಲಿ ಸೈಕಲ್ ಪಾತ್, ಗಾರ್ಡನ್ ಅಭಿವೃದ್ಧಿ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರು ಮಧ್ಯರಾತ್ರಿವರೆಗೆ ವಾಕ್ ಮಾಡಬಹುದು. ಈ ಹಿಂದೆ ಮಳೆಗಾಲದಲ್ಲಿ ನಾಲಾ ತುಂಬಿ ಹರಿದು, ಸುತ್ತಮುತ್ತಲಿನ ನಿವಾಸಿಗಳಿಗೆ ತೊಂದರೆ ಉಂಟಾಗುತ್ತಿತ್ತು. ನಾಲಾವನ್ನು ಎತ್ತರಕ್ಕೆ ಏರಿಸಲಾಗಿದೆ.‌ ಕಲ್ಲುಗಳನ್ನು ಹಾಕಿ ನೀರು ಇಂಗುವಂತೆ ಮಾಡಲಾಗಿದೆ. ಇದರಿಂದ ಅಂತರ್ಜಲದ ಮಟ್ಟವು ಕೂಡ ಹೆಚ್ಚಾಗಲಿದೆ. ಅಲ್ಲದೇ ಹಳೆಯ ನಾಲ್ಕು ಸೇತುವೆಗಳನ್ನು ಮರು ನಿರ್ಮಾಣ ಮಾಡಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಡಿ‌ ಕೈಗೊಂಡ ರಸ್ತೆ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ‌. ಸ್ಮಾರ್ಟ್ ಸಿಟಿ ಆಗಲು ಹುಬ್ಬಳ್ಳಿ ಧಾರವಾಡ ದಾಪುಗಾಲು ಇಡುತ್ತಿದೆ ಎಂದರು.

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅರ್ಬನ್ ಅಫೇರ್ಸ್ (NIUA) ನಿಯೋಗದ ನಿರ್ದೇಶಕ ಹಿತೇಶ್ ವೈದ್ಯ ಮಾತನಾಡಿ, ಸ್ಮಾರ್ಟ್ ಸಿಟಿ ಯೋಜನೆಯಡಿ ಈ ತರಹದ ಕಾಮಗಾರಿಯನ್ನು ಕೈಗೊಂಡಿರುವುದು ಬಹಳ ಸಂತಸ ತಂದಿದೆ. ಮೊದಲ ಪ್ರಾಯೋಗಿಕ( Pilot) ಕಾಮಗಾರಿಯು ಮುಕ್ತಾಯದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಯೋಜನೆಯ ಉಳಿದ ಹಣವನ್ನು ಬಿಡುಗಡೆ ಮಾಡಲಾಗುವುದು. ಸಾರ್ವಜನಿಕ ಸ್ಥಳವನ್ನು ಈ ರೀತಿಯಾಗಿಯೂ ಬಳಕೆ ಮಾಡಿಕೊಳ್ಳಬಹುದು ಎಂದು ಈ ಯೋಜನೆ ನಮಗೆ ತಿಳಿಸಿಕೊಟ್ಟಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ. ಯೋಜನೆಯ ತಂಡವು ಉತ್ತಮ ಕಾರ್ಯವನ್ನು ಮಾಡಿದೆ. ಆ ತಂಡವನ್ನು ಅಭಿನಂದಿಸಲೇಬೇಕು. ಮುಂದಿನ ಪೀಳಿಗೆಗೆ ಉಪಯುಕ್ತರವಾಗಲಿದೆ ಎಂದು ತಿಳಿಸಿದರು.

Edited By :
Kshetra Samachara

Kshetra Samachara

04/04/2022 09:17 am

Cinque Terre

7.26 K

Cinque Terre

2

ಸಂಬಂಧಿತ ಸುದ್ದಿ