ಧಾರವಾಡ: ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆ ಜೊತೆಗೆ ಅಗತ್ಯ ವಸ್ತುಗಳ ಬೆಲೆ ಕೂಡ ಏರಿಕೆಯಾಗುತ್ತಿದ್ದು, ಇದೀಗ ಸರ್ಕಾರ ವಿದ್ಯುತ್ ದರವನ್ನೂ ಏರಿಕೆ ಮಾಡಿ ಬಡವರಿಗೆ ಗಾಯದ ಮೇಲೆ ಬರೆ ಎಳೆದಿದೆ ಎಂದು ವಿರೋಧ ವ್ಯಕ್ತಪಡಿಸಿದ ಎಸ್‌ಯುಸಿಐ ಸಂಘಟನೆ ಕಾರ್ಯಕರ್ತರು ಧಾರವಾಡದ ವಿವೇಕಾನಂದ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಅನುಸರಿಸಿ ಬಡವರಿಗೆ ನಿತ್ಯ ತೊಂದರೆ ಕೊಡುತ್ತಿದೆ. ತೈಲ ಬೆಲೆ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಬಡವರು ಕಂಗಾಲಾಗಿದ್ದಾರೆ. ಇದೀಗ ಗಾಯದ ಮೇಲೆ ಬರೆ ಎಂಬಂತೆ ವಿದ್ಯುತ್ ದರವನ್ನು ಸರ್ಕಾರ ಹೆಚ್ಚಳ ಮಾಡಿದೆ. ಕೂಡಲೇ ಸರ್ಕಾರ ಬೆಲೆ ಏರಿಕೆ ನೀತಿಯನ್ನು ಕೈ ಬಿಟ್ಟು ಬಡವರ ಹಿತ ಕಾಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
Kshetra Samachara
07/04/2022 03:34 pm