ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಿಂದ ಮಂಗಳೂರು, ಮೈಸೂರಿಗೆ ವಿಮಾನ ಸೇವೆ ಆರಂಭ

ಹುಬ್ಬಳ್ಳಿ/ ನವದೆಹಲಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ವಿಮಾನಯಾನ ಪ್ರಯಾಣಿಕರಿಗೆ ಶುಭ ಸುದ್ದಿ. ಹುಬ್ಬಳ್ಳಿಯಿಂದ ಮಂಗಳೂರು ಮತ್ತು ಮೈಸೂರಿಗೆ ಸಂಪರ್ಕ ಒದಗಿಸುವ ವಿಮಾನ ಸೇವೆ ಆರಂಭಿಸಲು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿಯವರು ಇಂಡಿಗೋ ವಿಮಾನಯಾನ ಸಂಸ್ಥೆಗೆ ಮನವಿ ಮಾಡಿದ್ದರು. ಸಚಿವರ ಮನವಿಗೆ ಸ್ಪಂದಿಸಿದ ಇಂಡಿಗೋ ಸಂಸ್ಥೆಯು ಇದೇ ಮೇ 1ರಿಂದ ವಾರದಲ್ಲಿ 4 ದಿನ ಮಂಗಳೂರಿಗೆ ಮತ್ತು ಮೇ 3ರಿಂದ ವಾರದಲ್ಲಿ 3 ದಿನ ಮೈಸೂರಿಗೆ ವಿಮಾನ ಹಾರಾಟ ಪ್ರಾರಂಭಿಸಲಿದ್ದಾರೆ ಎಂದು ಸಚಿವರು ದೆಹಲಿ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು ಸುಸಜ್ಜಿತ ನಿಲ್ದಾಣವನ್ನಾಗಿ ಮಾರ್ಪಡಿಸಿದೆ. ಹುಬ್ಬಳ್ಳಿಯಿಂದ ಮೈಸೂರು, ಮಂಗಳೂರು ನಗರಗಳಿಗೆ ವಿಮಾನ ಯಾನ ಸೇವೆ ಅವಶ್ಯಕತೆ ಇತ್ತು. ಬಹುದಿನ ಬೇಡಿಕೆಗೆ ಇಂದು ಚಾಲನೆ ನೀಡಲಾಗುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇದನ್ನು ಸಾಧ್ಯವಾಗಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಇಂಡಿಗೋದ ಆಡಳಿತ ವರ್ಗಕ್ಕೆ ಸಚಿವ ಜೋಶಿ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

Edited By : Vijay Kumar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

08/04/2022 10:33 pm

Cinque Terre

83.82 K

Cinque Terre

19

ಸಂಬಂಧಿತ ಸುದ್ದಿ