ಸಾಕು ಪ್ರಾಣಿಗಳಿಗೆ ಒಳ್ಳೆಯ ಚಿಕಿತ್ಸೆ ದೊರಕಲಿ ಎಂಬ ಸದುದ್ದೇಶದಿಂದ ಸರ್ಕಾರ ಗ್ರಾಮಗಳಲ್ಲೂ ಸಹ ಪಶು ಆಸ್ಪತ್ರೆಗಳನ್ನು ನಿರ್ಮಿಸಿದೆ. ಆಸ್ಪತ್ರೆ ನಿರ್ಮಾಣ ಆದ್ರೂ ಸರಿಯಾದ ನಿರ್ವಹಣೆ ಇಲ್ಲ ಅಂದ್ರೆ ಏನು ಉಪಯೋಗ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಹೌದು … ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸ್ವಚ್ಛತೆ ಅನ್ನೋದೇ ಇಲ್ಲ. ಜಿಲ್ಲಾ ಪಂಚಾಯತ್ ಪಶು ಪಾಲನಾ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ಆರ್ ಐ ಡಿ ಎಫ್ 2021 ರ ಯೋಜನೆಯಡಿಯಲ್ಲಿ ಕಳೆದ ಒಂದು ವರ್ಷದ ಹಿಂದೆಯಷ್ಟೇ ನಿರ್ಮಾಣಗೊಂಡ ಈ ಆಸ್ಪತ್ರೆ ಬಗ್ಗೆ ಗ್ರಾಮಸ್ಥರಿಗೆ ಅಸಮಾಧಾನ ಇದೆ.
ಇಲ್ಲಿ ಸರಿಯಾದ ನಿರ್ವಹಣೆ ಇಲ್ಲ. ಸ್ವಚ್ಛತೆಯಂತೂ ಇಲ್ಲವೇ ಇಲ್ಲ. ಆಸ್ಪತ್ರೆಯ ಆವರಣದಲ್ಲಿ ನೀರು ನಿಂತು ಪಾಚಿ ಕಟ್ಟಿದರೂ ಸಹ ಸ್ವಚ್ಛಗೊಳಿಸುವವರಿಲ್ಲದೆ ಸಾರ್ವಜನಿಕರು ಒಳಬಾರದಂತಾಗಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ..
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
09/04/2022 03:27 pm