ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ನವಲೂರು ಮೇಲ್ಸೇತುವೆ ಕಾಮಗಾರಿ ಪುನರಾರಂಭ

ಧಾರವಾಡ: ಹುಬ್ಬಳ್ಳಿ, ಧಾರವಾಡ ರಸ್ತೆ ಮಧ್ಯೆ ಇರುವ ನವಲೂರು ಗ್ರಾಮದ ಮೇಲ್ಸೇತುವೆ ಕಾಮಗಾರಿ ಇದೀಗ ಪುನರಾರಂಭಗೊಂಡಿದೆ.

ನವಲೂರು ಗ್ರಾಮದ ಗ್ರಾಮಸ್ಥರ ವಿರೋಧದ ಹಿನ್ನೆಲೆಯಲ್ಲಿ ಹಲವು ವರ್ಷಗಳಿಂದ ಈ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಗ್ರಾಮಸ್ಥರಿಗೆ ಈ ಕಾಮಗಾರಿಯಿಂದ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗುತ್ತಿದೆ ಎಂದು ನವಲೂರು ಗ್ರಾಮಸ್ಥರು ಕಾಮಗಾರಿ ನಡೆಸದಂತೆ ಪ್ರತಿಭಟನೆ ನಡೆಸಿದ್ದರು.

ಅಲ್ಲದೆ, ನ್ಯಾಯಾಲಯದಲ್ಲಿ ಪ್ರಕರಣವನ್ನು ಸಹ ದಾಖಲಿಸಿದ್ದರು. ಇದೀಗ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್ ಸಂಸ್ಥೆ, ಜನರಿಗೆ ಅನುಕೂಲವಾಗುವಂತೆ ಕಾಮಗಾರಿಯನ್ನು ಕೈಗೊಳ್ಳಲು ನಿರ್ಧಾರ ತೆಗೆದುಕೊಂಡು ಜನರಿಗೆ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಾಮಗಾರಿ ಪುನರಾರಂಭಗೊಂಡಿದೆ.

ಅಗತ್ಯವಿರುವ ಬಸ್ ನಿಲ್ದಾಣ ಸೌಲಭ್ಯ ಹಾಗೂ ಜನರಿಗೆ ಅನುಕೂಲವಾಗುವಂತೆ ಮೇಲ್ಸೇತುವೆ ನಿರ್ಮಾಣ ಮಾಡಲು ಒಪ್ಪಿಕೊಂಡ ಹಿನ್ನೆಲೆಯಲ್ಲಿ ಇದೀಗ ಕಾಮಗಾರಿ ಮತ್ತೆ ಪ್ರಾರಂಭವಾಗಿದೆ.

Edited By : Nagesh Gaonkar
Kshetra Samachara

Kshetra Samachara

04/05/2022 10:18 pm

Cinque Terre

32.96 K

Cinque Terre

6

ಸಂಬಂಧಿತ ಸುದ್ದಿ