ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಡಿಸಿ ಕಚೇರಿ ಎದುರು ಹಲಗೆ ಬಾರಿಸಿದ ಪೌರ ಕಾರ್ಮಿಕರು

ಧಾರವಾಡ: ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಕಸದ ವಾಹನ ಚಾಲಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು ಸೇರಿದಂತೆ ಇತರೆ ಕಾರ್ಮಿಕರನ್ನು ಕಾಯಂ ನೌಕರರನ್ನಾಗಿ ನೇಮಕ ಮಾಡಿಕೊಳ್ಳುವಂತೆ ಒತ್ತಾಯಿಸಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಹಲಗೆ ಬಾರಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯ್ತಿಗಳಲ್ಲಿ ಪೌರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಪೌರ ಕಾರ್ಮಿಕರ ಬದುಕು ಶೋಚನೀಯವಾಗಿದೆ. 2017-18ನೇ ಸಾಲಿನಲ್ಲಿ ಅಂದಿನ ರಾಜ್ಯ ಕಾಂಗ್ರೆಸ್ ಸರ್ಕಾರ ಗುತ್ತಿಗೆ ಪದ್ಧತಿಯನ್ನು ತೆಗೆದು ಹಾಕಿ ಎಲ್ಲ ಪೌರ ಕಾರ್ಮಿಕರನ್ನು ಕಾಯಂಗೊಳಿಸಲು ನಿರ್ಣಯ ಕೈಗೊಂಡಿತ್ತು. ಆದರೆ, ನಗರಾಭಿವೃದ್ಧಿ ಇಲಾಖೆ ಮತ್ತು ಪೌರಾಡಳಿತ ನಿರ್ದೇಶನಾಲಯದ ದಲಿತ, ಪೌರ ಕಾರ್ಮಿಕರ ವಿರೋಧಿ ಅಧಿಕಾರಿಗಳು ಸಚಿವ ಸಂಪುಟದ ನಿರ್ಣಯವನ್ನು ಯಥಾವತ್ತಾಗಿ ಅನುಷ್ಠಾನಗೊಳಿಸದೇ ಮೋಸ ಮಾಡಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಒಂದು ತಿಂಗಳ ಒಳಗಾಗಿ ಪೌರ ಕಾರ್ಮಿಕರನ್ನು ಕಾಯಂಗೊಳಿಸಬೇಕು. ಇಲ್ಲದೇ ಹೋದರೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಕಾರ್ಮಿಕರು ಎಚ್ಚರಿಸಿದರು.

Edited By :
Kshetra Samachara

Kshetra Samachara

19/05/2022 10:04 pm

Cinque Terre

71.61 K

Cinque Terre

2

ಸಂಬಂಧಿತ ಸುದ್ದಿ