ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡಗಳು ತಲೆ ಎತ್ತಿದ್ದು, ಸಾಕಷ್ಟು ಸಮಸ್ಯೆಗಳನ್ನುಂಟು ಮಾಡಿದ್ದವು. ಈ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಅನಧಿಕೃತ ಕಟ್ಟಡಗಳ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ.
ಹಳೆ ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯಲ್ಲಿ ಅನಿಧಿಕೃತ ಕಟ್ಟಡ ತೆರವು ಕಾರ್ಯಾಚರಣೆ ಪೊಲೀಸ್ ಭದ್ರತೆಯಲ್ಲಿ ನಡೆಸಲಾಯಿತು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳು ನೇತೃತ್ವದಲ್ಲಿ ನಡೆಸಲಾಗಿದ್ದು, ಬೆಳಿಗ್ಗೆಯಿಂದಲೇ ಸಾಕಷ್ಟು ಸಾರ್ವಜನಿಕರ ವಿರೋಧವಾಗಿತ್ತು. ಈ ನಿಟ್ಟಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇನ್ನೂ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಬಂದೋಬಸ್ತ್ ನೀಡಿದ್ದು ಈಗಾಗಲೇ ಅತಿಕ್ರಮಣ ಮಾಡಿಕೊಂಡಿರುವ ಕುರಿತು ಎಚ್ಚರಿಕೆ ನೋಟಿಸ್ ಸಹ ಜಾರಿ ಮಾಡಲಾಗಿತ್ತು. ಈ ನಡುವೆ ಮನೆಯ ಮಾಲೀಕರು ತಮ್ಮ ವಸ್ತುಗಳನ್ನು ತೆಗೆಯಲು ಅವಕಾಶವನ್ನು ನೀಡಬೇಕು ಎಂದು ಮನವಿ ಮಾಡಿಕೊಳ್ಳುತ್ತಿದ್ದು, ಈಗಾಗಲೇ ಅನೇಕ ಭಾರಿ ಸಮಯಾಕಾಶ ನೀಡಲಾಗಿತ್ತು. ಆದರೇ ಯಾವುದೇ ರೀತಿಯಲ್ಲಿ ಸ್ಥಳೀಯರು ಸ್ಪಂದಿಸದೇ ಇರುವ ಕಾರಣ ನ್ಯಾಯಾಲಯದ ಆದೇಶದ ಮೇರೆಗೆ ತೆರವು ಕಾರ್ಯಾಚರಣೆ ಮುಂದುವರಿದಿದೆ.
Kshetra Samachara
01/06/2022 01:57 pm