ಧಾರವಾಡ: ಧಾರವಾಡದ ಹಳೇ ಬಸ್ ನಿಲ್ದಾಣದ ಪಕ್ಕದಲ್ಲಿರುವ ಪಾಲಿಕೆ ಒಡೆತನದ ಹೆರಿಗೆ ಆಸ್ಪತ್ರೆಗೆ ಮೇಯರ್ ಈರೇಶ ಅಂಚಟಗೇರಿ ಅವರು ಇಂದು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯಲ್ಲಿರುವ ಸೌಕರ್ಯ ಹಾಗೂ ಕಾರ್ಯ ಚಟುವಟಿಕೆಗಳ ಕುರಿತು ಮುಖ್ಯ ವೈದ್ಯಾಧಿಕಾರಿಯಾದ ದಂಡಪ್ಪನವರ ಅವರಿಂದ ಮಾಹಿತಿ ಪಡೆದರು.
ಈ ಹೆರಿಗೆ ಆಸ್ಪತ್ರೆಯಲ್ಲಿ ಖಾಸಗಿ ಆಸ್ಪತ್ರೆಗಳಿಗಿಂತ ಕಡಿಮೆ ಶುಲ್ಕ ಇರುವುದರಿಂದ ಮತ್ತು ಧಾರವಾಡದ ಪ್ರಸಿದ್ಧ ಹಿರಿಯ ಖಾಸಗಿ ವೈದ್ಯರು ಹೆರಿಗೆ ರೋಗಿಗಳನ್ನು ತಪಾಸಣೆ ಮಾಡುತ್ತಿರುವುದರಿಂದ ಜನಸಾಮಾನ್ಯರಿಗೆ ಬಹಳ ಅನುಕೂಲ ಆಗಿದೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಬೇಕಾದ ಸಹಕಾರವನ್ನು ಮಹಾನಗರ ಪಾಲಿಕೆ ವತಿಯಿಂದ ನೀಡಲಾಗುವುದು ಎಂದು ಮೇಯರ್ ತಿಳಿಸಿದರು.
Kshetra Samachara
14/06/2022 08:30 pm