ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ದುಡಿಯುವ ಕೈಗಳಿಗೆ ಕೆಲಸ ಕೊಡಿ

ಧಾರವಾಡ: ನರೇಗಾ ಯೋಜನೆ ಅಡಿಯಲ್ಲಿ ಕೂಲಿ, ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಆಗ್ರಹಿಸಿ, ಮುಳುಮುತ್ತಲ ಗ್ರಾಮದ ಮಹಿಳೆಯರು AIKKMS ಸಂಘಟನೆ ಮುಂದಾಳತ್ವದಲ್ಲಿ ಧಾರವಾಡ ಜಿಲ್ಲಾ ಪಂಚಾಯ್ತಿ ಎದುರು ಪ್ರತಿಭಟನೆ ನಡೆಸಿದರು.

ನರೇಗಾ ಯೋಜನೆ ಅಡಿಯಲ್ಲಿ ಕೂಲಿ ಕಾರ್ಮಿಕರಿಗೆ ಕೆಲಸ ನೀಡಬೇಕೆಂದು ಸರ್ಕಾರ ಹೇಳಿದ್ದರೂ ಕೂಡ ಗ್ರಾಮ ಪಂಚಾಯ್ತಿಯವರು ಕೆಲಸ ನೀಡುತ್ತಿಲ್ಲ. ಈ ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಕೆಲಸ ಇಲ್ಲದೇ ಕೂಲಿ ಕಾರ್ಮಿಕರು ಜೀವನ ನಡೆಸುವುದು ಕಷ್ಟವಾಗಿದೆ. ಕೂಡಲೇ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈ ಸಮಸ್ಯೆ ಬಗ್ಗೆ ಕೂಡಲೇ ಗಮನಹರಿಸಿ ಕೂಲಿ ಕಾರ್ಮಿಕರಿಗೆ ಕೆಲಸ ಕೊಡಿಸಬೇಕು ಎಂದು ಒತ್ತಾಯಿಸಿದರು.

Edited By :
Kshetra Samachara

Kshetra Samachara

16/06/2022 02:22 pm

Cinque Terre

18.75 K

Cinque Terre

0

ಸಂಬಂಧಿತ ಸುದ್ದಿ