ನವಲಗುಂದ : ತಹಶೀಲ್ದಾರ್ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಪ್ರತಿ ತಿಂಗಳ ಮೂರನೇ ಶನಿವಾರ ಹಮ್ಮಿಕೊಳ್ಳಲಾಗುತ್ತಿದ್ದು, ಜೂನ್ 18 ರಂದು ನವಲಗುಂದ ತಾಲ್ಲೂಕಿನ ಆಹೆಟ್ಟಿ ಗ್ರಾಮದಲ್ಲಿ ತಹಶೀಲ್ದಾರ ಅನಿಲ ಬಡಿಗೇರ ಅವರು ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಲಿದ್ದಾರೆ.
ಐ ವೇಳೆ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಬೇಡಿಕೆಗಳಿಗೆ ಸ್ಥಳದಲ್ಲಿಯೇ ನಿಯಮಾನುಸಾರ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿ, ಸಂಬಂಧಿಸಿದ ಫಲಾನುಭವಿಗಳಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳುತ್ತಾರೆ.
Kshetra Samachara
17/06/2022 11:56 am