ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ತಹಶೀಲ್ದಾರ್ ನೇತೃತ್ವದಲ್ಲಿ ಗ್ರಾಮ ವಾಸ್ತವ್ಯ, ವಿವಿಧ ಬೇಡಿಕೆಗೆ ಮನವಿ

ನವಲಗುಂದ: ನವಲಗುಂದ ತಾಲ್ಲೂಕಿನ ಆಹೆಟ್ಟಿ ಗ್ರಾಮದಲ್ಲಿ ತಹಶೀಲ್ದಾರ್ ಅನಿಲ ಬಡಿಗೇರ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದ್ದ ತಹಶೀಲ್ದಾರ್ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕುಡಿಯುವ ನೀರು, ಶಾಲಾ ಕಟ್ಟಡ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮನವಿಯನ್ನು ಗ್ರಾಮಸ್ಥರಿಂದ ಸ್ವೀಕರಿಸಲಾಯಿತು.

ಆಹೆಟ್ಟಿ ಗ್ರಾಮವು ಜಾವೂರು ಪ್ರಾಥಮಿಕ ಆರೋಗ್ಯ ಕೆಂದ್ರ ವ್ಯಾಪ್ತಿಯಲ್ಲಿ ಬರುತ್ತಿದ್ದು, ಇದರ ಬದಲಾಗಿ ಆಹೆಟ್ಟಿ ಗ್ರಾಮವನ್ನು ಮೊರಬ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸೇರಿಸಬೇಕು ಜತೆಗೆ ಹೊಸ ಶಾಲಾ ಕಟ್ಟಡ ನಿರ್ಮಿಸಬೇಕು, ಶಿಕ್ಷರ ಕೊರತೆಯನ್ನು ಸರಿಪಡಿಸಬೇಕು, ಗ್ರಾಮದಲ್ಲಿ ಗ್ರಾಮಲೆಕ್ಕಾಧಿಕಾರಿ ಕೊಠಡಿ ನಿರ್ಮಿಸಬೇಕು ಹಾಗೂ ಕುಡಿಯುವ ನೀರಿಗಾಗಿ ನೂತನ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಗ್ರಾಮಸೃರು ತಹಶೀಲ್ದಾರ ಅನೀಲ್ ಬಡಿಗೇರ ಅವರಿಗೆ ಮನವಿ ಸಲ್ಲಿಸಿದರು

ಇದೇ ಸಂದರ್ಭದಲ್ಲ ನಾನಾ ಯೋಜನೆಯಡಿ ಪಿಂಚಣೆ ಪಡೆಯಲು ಅರ್ಜಿ ಸಲ್ಲಿಸಿದ ಪಲಾನುಭವಿಗಳಿಗೆ ಆದೇಶ ಪತ್ರಗಳನ್ನು ಹಸ್ತಾಂತರಿಸಿದರು.

Edited By : PublicNext Desk
Kshetra Samachara

Kshetra Samachara

18/06/2022 10:33 pm

Cinque Terre

22.67 K

Cinque Terre

0

ಸಂಬಂಧಿತ ಸುದ್ದಿ