ನವಲಗುಂದ: ನವಲಗುಂದದಲ್ಲಿ ಸೋಮವಾರ ಕಾಂಗ್ರೆಸ್‌ನಿಂದ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ ಇಂದು ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್ ಇಲಾಖೆಯಿಂದ ರೂಟ್ ಮಾರ್ಚ್ ಹಮ್ಮಿಕೊಳ್ಳಲಾಗಿದ್ದು, ಪಟ್ಟಣದ ಪ್ರಮುಖ ರಸ್ತೆ ಹಾಗೂ ಬೀದಿಗಳಲ್ಲಿ ಸಂಚರಿಸಲಾಯಿತು.
ಇಂದು ನವಲಗುಂದ ಪಟ್ಟಣದಲ್ಲಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಪಥಸಂಚಲನವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಭಾರತೀಯ ರಿಸರ್ವ್ ಬೆಟಾಲಿಯನ್, ಜಿಲ್ಲಾ ಸಶಸ್ತ್ರ ಮೀಸಲು ಪಡೆ ಹಾಗೂ ಅಣ್ಣಿಗೇರಿ, ನವಲಗುಂದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ರೂಟ್ ಮಾರ್ಚ್ ನಲ್ಲಿ ಭಾಗಿಯಾಗಿದ್ದರು.
Kshetra Samachara
20/06/2022 01:47 pm