ಅಳ್ನಾವರ: ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹೊರಗುತ್ತಿಗೆ, ಕಸ ಸಾಗಿಸುವ ವಾಹನ ಚಾಲಕರು, ವಾಟರ್ ಮೆನ್, ಡಾಟಾ ಆಪರೇಟರ್ ಸೇರಿದಂತೆ ಇನ್ನುಳಿದ ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಪೌರ ಕಾರ್ಮಿಕರ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಿ ಜುಲೈ ಒಂದರಿಂದ ರಾಜ್ಯಾದ್ಯಂತ ಸ್ವಚ್ಛತೆ, ಕುಡಿಯುವ ನೀರು ಸ್ಥಗಿತಗೊಳಿಸಿ ಅನಿರ್ದಿಷ್ಟವದಿ ಮುಷ್ಕರವನ್ನ ಹಮ್ಮಿಕೊಂಡಿರುವುದರ ಕುರಿತು ಅಳ್ನಾವರ ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ನೇತ್ರಾವತಿ ಕಡಕೋಳ ಅವರಿಗೆ ಮನವಿ ಸಲ್ಲಿಸಲಾಯಿತು.
ಮೇ 19ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ನೌಕರರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ನೇರ ವೇತನಗೋಳಪಡಿಸುವಂತೆ ಹಾಗೂ ಪೌರಕಾರ್ಮಿಕರ ಎರಡನೇ ಹಂತದ ನೇಮಕಾತಿಗೆ ಒತ್ತಾಯಿಸಲಾಗಿತ್ತು. ಆದರೆ ಇದುವರೆಗೂ ಅದು ಕೈಗೂಡದ ಹಿನ್ನೆಲೆಯಲ್ಲಿ ಜುಲೈ 1ರಿಂದ ರಾಜ್ಯಾದ್ಯಂತ ಸ್ವಚ್ಛತೆ ಕುಡಿಯುವ ನೀರು ಎಲ್ಲ ಸೇವೆಗಳನ್ನು ಸ್ಥಗಿತಗೊಳಿಸಿ ರಾಜ್ಯದ ಆಯಾ ನಗರ ಸ್ಥಳೀಯ ಸಂಸ್ಥೆಗಳೆದುರು ಅನಿರ್ದಿಷ್ಟವಧಿ ಧರಣಿ ಆರಂಭಿಸಲು ತೀರ್ಮಾನಿಸಲಾಗಿದೆ. ಇದರ ಕುರಿತಾಗಿ ಅಳ್ನಾವರ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಟ್ಟಣ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಮನವಿ ಸಲ್ಲಿಸಲಾಯಿತು.
ಮಹಾಂತೇಶ ಪಠಾಣಿ
ಪಬ್ಲಿಕ್ ನೆಕ್ಸ್ಟ್ ಅಳ್ನಾವರ.
Kshetra Samachara
30/06/2022 08:58 pm