ಧಾರವಾಡ: ರಾಜ್ಯದಲ್ಲಿ ರೇಷ್ಮೆ ಬೆಳೆಗಾರರಿಗೆ ಅತ್ಯಾಧುನಿಕ ಮಾರುಕಟ್ಟೆ ಸೌಲಭ್ಯವನ್ನು ಒದಗಿಸಲು ಹಾವೇರಿ ಜಿಲ್ಲೆಯಲ್ಲಿ ನಬಾರ್ಡ್ ನೆರವಿನೊಂದಿಗೆ 15 ಕೋಟಿ ರೂಪಾಯಿ ವೆಚ್ಚದಲ್ಲಿ ಸರ್ಕಾರಿ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ ನಿರ್ಮಿಸಲು ಒತ್ತು ನೀಡಲಾಗಿದೆ ಎಂದು ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾವೇರಿ ಜಿಲ್ಲೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ರೈತರು ರೇಷ್ಮೆ ಬೆಳೆಯಲು ಮುಂದಾಗಿದ್ದಾರೆ. ಧಾರವಾಡ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ರೈತರು ರೇಷ್ಮೆ ಬೆಳೆಗೆ ಒತ್ತು ನೀಡಿದ್ದಾರೆ. ರೇಷ್ಮೆ ಬೆಳೆ ರೈತರ ಏಳ್ಗೆಗೆ ಕಾರಣವಾಗಿದೆ. 12 ತಿಂಗಳೂ ಸಹ ರೇಷ್ಮೆ ಬೆಳೆ ರೈತರ ಕೈ ಸೇರಲಿದೆ. ರೇಷ್ಮೆ ಬೆಳೆಗಾರರಿಗೆ ಅನುಕೂಲ ಆಗುವ ದೃಷ್ಠಿಯಿಂದ ರೇಷ್ಮೆ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದರು.
ರೇಷ್ಮೆ ಬೆಳೆಗಾರರಿಗೆ ನಮ್ಮ ಇಲಾಖೆಯಿಂದ ವಿವಿಧ ಸೌಲಭ್ಯಗಳನ್ನೂ ಕಲ್ಪಿಸಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಎಲ್ಲಾ ರೈತರು ಸಂಕಷ್ಟ ಎದುರಿಸಿದರು. ಆದರೆ, ರೇಷ್ಮೆ ಬೆಳೆಗಾರರಿಗೆ ಕಷ್ಟ ಎದುರಾಗಲಿಲ್ಲ. ಹೀಗಾಗಿಯೇ 2.50 ಲಕ್ಷ ರೇಷ್ಮೆ ಗೂಡು ಬೆಳೆಯಲು ಧನ ಸಹಾಯ ಮಾಡಲಾಗುತ್ತಿದೆ ಎಂದರು.
Kshetra Samachara
07/07/2022 02:45 pm