ನವಲಗುಂದ : ಪ್ರತಿ ತಿಂಗಳ ಮೂರನೇ ಶನಿವಾರ ತಹಶೀಲ್ದಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಗುವ ವಾಸ್ತವ್ಯ ಕಾರ್ಯಕ್ರಮವು ಜುಲೈ ತಿಂಗಳಲ್ಲಿ ನವಲಗುಂದ ತಹಶೀಲ್ದಾರ್ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನವಲಗುಂದ ತಾಲ್ಲೂಕಿನ ಹಾಳಕುಸುಗಲ್ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ತಹಶೀಲ್ದಾರ ಅನಿಲ ಬಡಿಗೇರ ಅವರ ನೇತೃತ್ವದಲ್ಲಿ ನಡೆಯಲಿರುವ ಗ್ರಾಮ ವಾಸ್ತವ್ಯದಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಬೇಡಿಕೆಗಳಿಗೆ ಸ್ಥಳದಲ್ಲಿಯೇ ನಿಯಮಾನುಸಾರ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿ, ಸಂಬಂಧಿಸಿದ ಫಲಾನುಭವಿಗಳಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತದೆ.
Kshetra Samachara
15/07/2022 08:57 am