ಹುಬ್ಬಳ್ಳಿ: ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಎಲ್ಲೆಡೆಯೂ ಸಿದ್ಧತೆ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಹು-ಧಾ ಮಹಾನಗರ ಪಾಲಿಕೆ ಕೂಡ ನೂತನ ಸದಸ್ಯರ ನೇತೃತ್ವದಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲು ತಯಾರಿ ನಡೆಸಿದೆ.
ಸುಮಾರು ವರ್ಷಗಳಿಂದ ಚುನಾಯಿತ ಸದಸ್ಯರು ಇಲ್ಲದೇ ಅಧಿಕಾರ ನಡೆಸಿದ್ದ ಪಾಲಿಕೆಗೆ ಈಗ ಮೇಯರ್, ಉಪಮೇಯರ್ ಹಾಗೂ ಸದಸ್ಯರು ಸೇರಿದಂತೆ 82 ಜನರ ತಂಡ ಈಗ ಪಾಲಿಕೆಯನ್ನು ಪ್ರತಿನಿಧಿಸುತ್ತಿದೆ. ಈ ನಿಟ್ಟಿನಲ್ಲಿ ಅದ್ಧೂರಿ ಆಚರಣೆಗೆ ನಿರ್ಧಾರ ಮಾಡಲಾಗಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿ ನೆನಪಿಗಾಗಿ ಮಹಾನಗರ ಪಾಲಿಕೆಯ ಧಾರವಾಡ ಮತ್ತು ಹುಬ್ಬಳ್ಳಿ ಕಚೇರಿ ಆವರಣದಲ್ಲಿ 75 ಅಡಿ ಎತ್ತರದ ಧ್ವಜ ಸ್ಥಂಭ ನಿರ್ಮಿಸಲು ಪಾಲಿಕೆ ನಿರ್ಧಾರ ಮಾಡಿದ್ದು, ಈಗಾಗಲೇ ಭರದಿಂದ ಸಿದ್ಧತೆ ನಡೆದಿದೆ.
ಇನ್ನೂ ಈ ಹಿಂದೆ ನಡೆದ ಸಾಮಾನ್ಯ ಸಭೆಯಲ್ಲಿ ಇಂತಹದೊಂದು ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಅವಳಿನಗರ ಅಮೃತ ಮಹೋತ್ಸವ ಆಚರಣೆಯಲ್ಲಿ ಹೊಸ ದಾಖಲೆ ನಿರ್ಮಾಣ ಮಾಡಲಿದೆ.
Kshetra Samachara
04/08/2022 02:19 pm