ಹುಬ್ಬಳ್ಳಿ : ನಿನ್ನೆ ಸುರಿದ ಬಾರಿ ಮಳೆಯಿಂದಾಗಿ ವಿದ್ಯುತ್ ತಂತಿಯೊಂದು ಕಟ್ ಆಗಿ ಕೆಳಗೆ ಬಿದ್ದ ಘಟನೆ ನಗರದ ನೇಕಾರ ನಗರದ ಅಜ್ಮೀರ್ ನಗರದಲ್ಲಿ ನಡೆದಿದೆ.
ನಗರದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ, ವಿದ್ಯುತ್ ತಂತಿ ಕಟ್ ಆಗಿ ಕೆಳಗೆ ಬಿದ್ದಿದೆ. ಇದರಿಂದ ಸ್ಥಳೀಯರು ಆತಂಕಗೊಂಡಿದ್ದಾರೆ. ವಿಪರ್ಯಾಸವೆಂದರೆ ನಿನ್ನೆಯೇ ಈ ಘಟನೆ ನಡೆದಿದ್ದರೂ ಇಂದು ಬೆಳಿಗ್ಗೆಯಾದರೂ ಕೆಇಬಿ ಅವರು ಸ್ಥಳಕ್ಕೆ ಬಂದಿಲ್ಲ. ಅಧಿಕಾರಿಗಳ ಈ ನಡೆಯನ್ನು ಸ್ಥಳೀಯರು ಖಂಡಿಸಿದ್ದಾರೆ.
ವಾಹನಗಳು ಸಂಚರಿಸುವ ರಸ್ತೆಯಲ್ಲಿಯೇ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ವಾಹನ ಭೀತಿಯಲ್ಲಿಯೇ ಸಂಚರಿಸುವ ಪರಿಸ್ಥಿತಿ ಎದುರಾಗಿದ್ದು, ಕೆಇಬಿ ಅವರು ತುಂಡಾಗಿ ಬಿದ್ದಿರುವ ವಿದ್ಯುತ್ ತಂತಿಯನ್ನು ಸರಿಪಡಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
Kshetra Samachara
06/08/2022 01:18 pm