ಧಾರವಾಡ: ಅಟಲ್ ಜೀ ಜನಸ್ನೇಹಿ ಕೇಂದ್ರ ಯೋಜನೆಯಡಿ ಸಾರ್ವಜನಿಕರಿಗೆ ವಿವಿಧ ಪ್ರಮಾಣ ಪತ್ರಗಳ ಸೇವೆ ಒದಗಿಸುವಲ್ಲಿ ಧಾರವಾಡ ಜಿಲ್ಲೆಯ ನಾಡ ಕಚೇರಿಗಳಲ್ಲಿ ಜುಲೈ -2022 ಮಾಸದಲ್ಲಿ ಸ್ವೀಕರಿಸಿದ 28,113 ಅರ್ಜಿಗಳನ್ನು ನಿಗದಿತ ಅವಧಿಗಿಂತ ಮೊದಲೇ ಶೇ . 99.98 ರಷ್ಟು ವಿಲೇವಾರಿ ಮಾಡಿ 7.14 ಸಿಗ್ಮಾ ಮೌಲ್ಯವನ್ನು ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದಿದೆ ಎಂದು ಅಟಲ್ ಜಿ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂಬಾಯಿ ಮಾನಕರ್ ತಿಳಿಸಿದ್ದಾರೆ.
ಈ ಕುರಿತು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಅಭಿನಂದನಾ ಪತ್ರ ಬರೆದಿರುವ ಅವರು, 8.9 ವಿಲೇವಾರಿ ಸೂಚ್ಯಂಕದ ( Disposal Index ) ಪ್ರಕಾರ ಧಾರವಾಡ ಜಿಲ್ಲೆಯಲ್ಲಿ 9.9 ಪಟ್ಟು ಅರ್ಜಿಗಳನ್ನು ನಿಗದಿತ ಅವಧಿಗಿಂತ ಶೀಘ್ರವಾಗಿ ವಿಲೇವಾರಿ ಮಾಡಿ , ಪ್ರಸಕ್ತ ಸಾಲಿನ ಜುಲೈ ತಿಂಗಳಲ್ಲಿ ಜಿಲ್ಲೆಯು ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ ಪಡೆದಿರುವುದು ಶ್ಲಾಘನೀಯ. ಜಿಲ್ಲೆಯಲ್ಲಿನ ಈ ಕಾರ್ಯ ಸಾಧನೆಗೆ ಜಿಲ್ಲಾಧಿಕಾರಿಗಳ ಕಚೇರಿ, ನಾಡಕಚೇರಿ, ಅಟಲ್‌ಜೀ ಜನಸ್ನೇಹಿ ಕೇಂದ್ರದ ಅಧಿಕಾರಿ, ಸಿಬ್ಬಂದಿ ವರ್ಗದ ಸಹಕಾರ, ಕಾರ್ಯತತ್ಪರತೆ ಕಾರಣವಾಗಿರುತ್ತದೆ. ಮುಂದಿನ ದಿನಗಳಲ್ಲಿಯೂ ಸಹ ಜಿಲ್ಲೆಯಲ್ಲಿ ಇದೇ ರೀತಿಯ ಸಹಕಾರ ಹಾಗೂ ಕಾರ್ಯ ಕ್ಷಮತೆಯನ್ನು ನಿರೀಕ್ಷಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.
Kshetra Samachara
11/08/2022 10:23 pm