ಧಾರವಾಡ: ಹುಬ್ಬಳ್ಳಿ, ಧಾರವಾಡ ಅವಳಿನಗರಗಳ ಮಧ್ಯೆ ಅನುಷ್ಠಾನಗೊಂಡಿರುವ ಬಿಆರ್‌ಟಿಎಸ್ ರಸ್ತೆ ಹಾಗೂ ನಿಲ್ದಾಣಗಳ ಸುರಕ್ಷತೆಗಾಗಿ ಇಷ್ಟು ದಿನ ಖಾಸಗಿ ವ್ಯಕ್ತಿಗಳನ್ನು ಸೆಕ್ಯುರಿಟಿ ಗಾರ್ಡ್‌ಗಳನ್ನಾಗಿ ನೇಮಕ ಮಾಡಲಾಗಿತ್ತು. ಆದರೆ, ಇದೀಗ ಬಿಆರ್‌ಟಿಎಸ್ ಸಂಸ್ಥೆಯು ಸೆಕ್ಯುರಿಟಿ ಗಾರ್ಡ್‌ಗಳ ಬದಲಿಗೆ ಮಾಜಿ ಸೈನಿಕರ ವೆಲ್‌ಫೇರ್ ಸೊಸೈಟಿ ವತಿಯಿಂದ ಮಾರ್ಷಲ್‌ಗಳನ್ನು ನೇಮಕ ಮಾಡಿದೆ.
ಬಿಆರ್‌ಟಿಎಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ರಸ್ತೆಯಲ್ಲಿ ಖಾಸಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹಾಗೂ ಈ ರಸ್ತೆಯಲ್ಲಿ ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ನಿರ್ಬಂಧ ಹೇರುವುದು ಈ ಎಲ್ಲ ಕೆಲಸ ನಿರ್ವಹಿಸಲು 38 ಮಾರ್ಷಲ್‌ಗಳನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನು ಮುಂದೆ ಬಿಆರ್‌ಟಿಎಸ್ ರಸ್ತೆಯಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸಲಿದ್ದಾರೆ.
ಇದಕ್ಕೂ ಮುನ್ನ ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸುವುದಕ್ಕೋಸ್ಕರ್ ಬಿಆರ್‌ಟಿಎಸ್ ರಸ್ತೆಯಲ್ಲಿ ಮಾರ್ಷಲ್‌ಗಳು ರೂಟ್ ಮಾರ್ಚ್ ನಡೆಸಿದರು.
Kshetra Samachara
01/09/2022 01:50 pm