ನವಲಗುಂದ : ನವಲಗುಂದ ತಾಲ್ಲೂಕಿನ ಅಳಗವಾಡಿ ಗ್ರಾಮದಲ್ಲಿ ಸೆಪ್ಟೆಂಬರ್ 17 ರಂದು ನವಲಗುಂದ ತಾಲೂಕಾ ದಂಡಾಧಿಕಾರಿಗಳಾದ ಅನಿಲ ಬಡಿಗೇರ ಅವರ ನೇತೃತ್ವದಲ್ಲಿ ತಹಶೀಲ್ದಾರ್ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪ್ರತಿ ತಿಂಗಳ ಮೂರನೇ ಶನಿವಾರ ತಹಶೀಲ್ದಾರ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗುವ ವಾಸ್ತವ್ಯ ಕಾರ್ಯಕ್ರಮವು ಗ್ರಾಮಗಳಲ್ಲಿನ ಸಮಸ್ಯೆಯನ್ನು ನೇರವಾಗಿ ಗ್ರಾಮಸ್ಥರು ತಹಶೀಲ್ದಾರ್ ಅವರ ಗಮನಕ್ಕೆ ತರುವಂತಹ ಕೆಲಸ ನಡೆಯುತ್ತದೆ.
ಈ ವೇಳೆ ತಹಶೀಲ್ದಾರ ಅನಿಲ ಬಡಿಗೇರ ಗ್ರಾಮ ವಾಸ್ತವ್ಯದಲ್ಲಿ ಭಾಗಿಯಾಗಿ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಿಸಿದ ಯೋಜನೆ ಹಾಗೂ ಅಗತ್ಯ ಮಾಹಿತಿಯೊಂದಿಗೆ ಖುದ್ದಾಗಿ ಹಾಜರಿದ್ದು, ಸಾರ್ವಜನಿಕರ ಅಹವಾಲುಗಳಿಗೆ, ಬೇಡಿಕೆಗಳಿಗೆ ಸ್ಥಳದಲ್ಲಿಯೇ ನಿಯಮಾನುಸಾರ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಪೂರ್ಣಗೊಳಿಸಿ, ಸಂಬಂಧಿಸಿದ ಫಲಾನುಭವಿಗಳಿಗೆ ಪರಿಹಾರ ನೀಡಲು ಕ್ರಮಕೈಗೊಳ್ಳಲಾಗುತ್ತದೆ.
Kshetra Samachara
16/09/2022 09:10 pm