ಧಾರವಾಡ: ಫುಟಪಾತ್ ಜಾಗವನ್ನು ಅತಿಕ್ರಮಣ ಮಾಡಿಕೊಂಡು ಹಾಕಲಾಗಿದ್ದ ಅಂಗಡಿಗಳನ್ನು ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ತೆರವುಗೊಳಿಸಲಾಗಿದೆ.
ಹಲವು ವರ್ಷಗಳ ಹಿಂದೆಯೇ ಫುಟಪಾತ್ ಜಾಗದಲ್ಲಿ ಸುಮಾರು 30 ಅಂಗಡಿಗಳನ್ನು ಹಾಕಲಾಗಿತ್ತು. ಇದರಿಂದ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗುತ್ತಿತ್ತು. ಹೀಗಾಗಿ ಪಾಲಿಕೆಯವರು ಅಂಗಡಿಯವರಿಗೆ, ತಮ್ಮ ಅಂಗಡಿಗಳನ್ನು ತೆರವುಗೊಳಿಸಿಕೊಳ್ಳುವಂತೆ ನೋಟಿಸ್ ನೀಡಿದ್ದರು. ಆದರೆ, ಅಂಗಡಿಕಾರರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿಕೊಳ್ಳದ ಹಿನ್ನೆಲೆಯಲ್ಲಿ ಇಂದು ಜೆಸಿಬಿಯಿಂದ ಮಹಾನಗರ ಪಾಲಿಕೆಯವರೇ ಅಂಗಡಿಗಳನ್ನು ತೆರವುಗೊಳಿಸಿದ್ದಾರೆ.
Kshetra Samachara
07/10/2022 03:59 pm