ಅಣ್ಣಿಗೇರಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಶಾರದಾ ಪಬ್ಲಿಕ್ ಸ್ಕೂಲ್ ವತಿಯಿಂದ ಮಾನವ ನೀನು ಬದಲಾಗು ಎಂಬ ಪರಿಸರ ಜಾಗೃತಿ ಕುರಿತು ಬೀದಿ ನಾಟಕ ಪ್ರದರ್ಶನ ಮಾಡಲಾಯಿತು.
ದಿನಂಪ್ರತಿ ನಾವು ಉಪಯೋಗಿಸುವ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಗಿಡಮರಗಳನ್ನು ನಾಶ ಮಾಡುತ್ತಿರುವುದರಿಂದ ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ನಾಟಕ ಪ್ರದರ್ಶನ ಮಾಡುವ ಮುಖಾಂತರ ಸಾರ್ವಜನಿಕರಿಗೆ ತಿಳುವಳಿಕೆಯನ್ನು ಮಾಡಿದರು.
ಈ ವೇಳೆ ಶಾಲೆಯ ಆಡಳಿತ ವರ್ಗ ಹಾಗೂ ಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Kshetra Samachara
18/06/2022 09:37 am