ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನವಲಗುಂದ: ಅಂಗನವಾಡಿ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಕೆ ಆರೋಪ

ನವಲಗುಂದ: ಇತ್ತೀಚಿಗೆ ಕಳಪೆ ಗುಣಮಟ್ಟದ ಆಹಾರ ಧಾನ್ಯಗಳು ಮಾರಾಟವಾಗುವುದು ಸರ್ವೆ ಸಾಮಾನ್ಯ. ಆದರೆ ಇದು ಚಿಕ್ಕ ಮಕ್ಕಳಿಗೆ ನೀಡುತ್ತಿರುವುದು ದುರಾದೃಷ್ಟಕರ ಸಂಗತಿ, ಇದಕ್ಕೆ ಸದೃಶ್ಯ ಎಂಬಂತೆ ನವಲಗುಂದ ಪಟ್ಟಣದ 12ನೇ ಅಂಗನವಾಡಿ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಕೆ ಮಾಡಿರೋದಕ್ಕೆ ಈಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮಕ್ಕಳಿಗೆ ನೀಡುತ್ತಿದ್ದ ಶೇಂಗಾ ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದೆ. ಅದನ್ನೇ ಮಕ್ಕಳಿಗೆ ನೀಡಲಾಗುತ್ತಿದೆ. ಈ ಕುರಿತು ಹಲವು ಬಾರಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಅಲ್ಲದೇ ಈಗ ಬೆಲ್ಲ ಕೂಡಾ ಕಳಪೆ ನೀಡಲಾಗಿದೆ ಎಂಬ ಆರೋಪ ದಟ್ಟವಾಗಿದೆ.

ಘಟನೆಯ ಹಿನ್ನೆಲೆ ಸ್ಥಳಕ್ಕೆ ಸಿಡಿಪಿಒ ವಿಜಯಲಕ್ಷ್ಮಿ ಪಾಟೀಲ ಹಾಗೂ ಅಧಿಕಾರಿಗಳು ಭೇಟಿ ನೀಡಿ, ಮಾಹಿತಿ ಪಡೆದರು. ಈಗಾಗಲೇ ಈ ಕುರಿತು ಹಲವಾರು ಬಾರಿ ಇದಕ್ಕೆ ಸಂಭಂದಪಟ್ಟ ಅಧಿಕಾರಿಗಳಿಗೆ ನೋಟಿಸ್ ನೀಡಿದ ನಂತರ ಹಲವು ಸಾಮಗ್ರಿ ಸರಿಯಾದ ರೀತಿಯಲ್ಲಿ ಪೂರೈಕೆ ಮಾಡುತ್ತಿದ್ದಾರೆ. ಅಧಿಕಾರಿಗಳಿಗೆ ಮುಂದಿನ ದಿನಗಳಲ್ಲಿ ಬೆಲ್ಲದ ಪ್ಯಾಕೆಟ್ ವಿಂಗಡಿಸಿ, ಪೂರೈಸುಂತೆ ತಾಕೀತು ಮಾಡಲಾಗುವುದು ಎಂದು ವಿಜಯಲಕ್ಷ್ಮಿ ಪಾಟೀಲತಿಳಿಸಿದರು.

Edited By : Manjunath H D
Kshetra Samachara

Kshetra Samachara

03/09/2022 12:12 pm

Cinque Terre

39.88 K

Cinque Terre

1

ಸಂಬಂಧಿತ ಸುದ್ದಿ