ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕಿಮ್ಸ್‌ಗೆ ನ್ಯಾಯಮೂರ್ತಿ ಬಿ.ವೀರಪ್ಪ ಹಠಾತ್ ಭೇಟಿ- ಮೂಲ ಸೌಕರ್ಯಗಳ ಪರಿಶೀಲನೆ

ಹುಬ್ಬಳ್ಳಿ: ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಾಧ್ಯಕ್ಷರಾದ ಬಿ. ವೀರಪ್ಪ ಅವರು ಇಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ರೋಗಿಗಳಿಗೆ ದೊರೆಯುತ್ತಿರುವ ಚಿಕಿತ್ಸೆ, ಔಷಧೋಪಚಾರ ಹಾಗೂ ಇತರೆ ಮೂಲ ಸೌಕರ್ಯಗಳ ಕುರಿತು ವಿಚಾರಿಸಿದರು.

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಹೆಲ್ಮೆಟ್ ಬಳಕೆ, ಸಂಚಾರ ನಿಯಮಗಳು ಸಮರ್ಪಕವಾಗಿ ಪಾಲನೆಯಾಗದಿರುವುದನ್ನು ಗಮನಿಸಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸಿಂಗ್ ಸಿಬ್ಬಂದಿ ಕೊರತೆ, ಮೂಲಸೌಕರ್ಯಗಳ ಅಭಿವೃದ್ಧಿ ಕುರಿತು ಸರ್ಕಾರಕ್ಕೆ ಪತ್ರ ಬರೆಯಲಾಗುವುದು. ಅಗತ್ಯ ಕ್ರಮ ಜರುಗಿಸದಿದ್ದರೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲಾಗುವುದು ಎಂದರು.

ಸರ್ಕಾರವು ಸಾರ್ವಜನಿಕರಿಗಾಗಿ ಬೃಹತ್ ಆಸ್ಪತ್ರೆ ನಿರ್ಮಿಸಿ, ಉಚಿತ ವೈದ್ಯಕೀಯ ಸೌಲಭ್ಯಗಳನ್ನು ನೀಡುತ್ತಿದೆ. ಸ್ಥಳೀಯ ಜನರೂ ಕೂಡ ಈ ಬಗ್ಗೆ ಕಾಳಜಿ ವಹಿಸಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಕಾಪಾಡಿಕೊಳ್ಳಬೇಕು. ಉತ್ತರ ಕರ್ನಾಟಕದ ಬಹುತೇಕ ಕಡೆ ಹೆಲ್ಮೆಟ್ ಬಳಕೆ, ಸಂಚಾರ ನಿಯಮಗಳ ಪಾಲನೆ ನಿರ್ಲಕ್ಷಿಸಿರುವುದರಿಂದ ರಸ್ತೆ ಅಪಘಾತಗಳ ಪ್ರಕರಣಗಳು ಹೆಚ್ಚು ಸಂಭವಿಸುತ್ತಿವೆ. ಸಾರ್ವಜನಿಕರು ಚಾಲನಾ ಪರವಾನಗಿ, ವಾಹನ ವಿಮೆ ಮತ್ತಿತರ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ಕುರಿತು ಇಲ್ಲಿನ ಜಿಲ್ಲಾಧಿಕಾರಿಗಳು ಹಾಗೂ ನಗರ ಪೊಲೀಸ್ ಆಯುಕ್ತರೊಂದಿಗೂ ಮಾತನಾಡಿ ನಿರ್ದೇಶನ ನೀಡಲಾಗುವುದು ಎಂದರು.

Edited By : Vijay Kumar
Kshetra Samachara

Kshetra Samachara

19/05/2022 08:44 pm

Cinque Terre

14.66 K

Cinque Terre

0

ಸಂಬಂಧಿತ ಸುದ್ದಿ