ಅಣ್ಣಿಗೇರಿ: ರಾಜ್ಯದಲ್ಲಿ ಈಗಾಗಲೇ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಏಕ ಬಳಕೆಯ ಪ್ಲಾಸ್ಟಿಕ್ ಅಂದರೆ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್ ಗಳು, ಪ್ಲಾಸ್ಟಿಕ್ ಪ್ಲೇಟ್, ಗ್ಲಾಸ್ ಹೀಗೆ ಅನೇಕ ತರದ ವಸ್ತುಗಳನ್ನು ನಿಷೇಧ ಮಾಡಿದೆ.
ಈ ಹಿನ್ನೆಲೆಯಲ್ಲಿ ಪಟ್ಟಣದ ಪುರಸಭೆಯ ಮುಖ್ಯ ಅಧಿಕಾರಿ ಮಹಾಂತೇಶ್ ನಿಡುವಣಿ ಅವರು, ಪಬ್ಲಿಕ್ ನೆಕ್ಸ್ಟ್ ಜೊತೆ ಮಾತನಾಡಿ ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಮಾಡಿಲಾಗಿದೆ. ಅಲ್ಲದೇ ಈ ಬಗ್ಗೆ ಪುರಸಭೆಯ ಕಚೇರಿ ವತಿಯಿಂದ ಸಭೆ ನಡೆಸಿ, ಸಾರ್ವಜನಿಕರಿಗೆ ಪ್ರಕಟಣೆ ಮೂಲಕ ನಿಷೇಧ ಮಾಡುವ ಕುರಿತು ಜಾಗೃತಿ ಮೂಡಿಸಲಾಗಿದೆ. ಕೆಲವು ಅಂಗಡಿಗಳ ಮೇಲೆ ದಾಳಿ ಮಾಡಿ ದಂಡವನ್ನೂ ವಿಧಿಸಲಾಗಿದ್ದು, ಸಾರ್ವಜನಿಕರು ಕೈ ಜೋಡಿಸಬೇಕು ಎಂದು ಪಬ್ಲಿಕ್ ನೆಕ್ಸ್ಟ್ ಮುಖಾಂತರ ಮನವಿ ಮಾಡಿದರು.
ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ
Kshetra Samachara
04/08/2022 01:54 pm