ಪಬ್ಲಿಕ್ ನೆಕ್ಸ್ಟ್ ಇಂಪ್ಯಾಕ್ಟ್
ಹುಬ್ಬಳ್ಳಿ; ಅಂತೂ ಇಂತೂ ವಾಣಿಜ್ಯನಗರಿ ಹುಬ್ಬಳ್ಳಿ ಕಿಮ್ಸ್ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ಥಳಿಗೆ ಪಬ್ಲಿಕ್ ನೆಕ್ಸ್ಟ್ ವರದಿಯಿಂದ ದುರಸ್ತಿ ಭಾಗ್ಯ ಸಿಕ್ಕಂತಾಗಿದೆ.
ಹೌದು...ಕಳೆದ ಎರಡು ದಿನಗಳ ಹಿಂದೆಯಷ್ಟೇ ನಿಮ್ಮ ಪಬ್ಲಿಕ್ ನೆಕ್ಸ್ಟ್ ವರದಿಯೊಂದನ್ನು ಭಿತ್ತರಿಸಿದ ಬೆನ್ನಲ್ಲೇ ಹು-ಧಾ ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಮಹಾತ್ಮ ಗಾಂಧಿಯವರ ಪುತ್ಥಳಿಗೆ ದುರಸ್ತಿ ಕಾರ್ಯ ಹಾಗೂ ಸುಣ್ಣ ಬಣ್ಣ ಬಳಿಯುವ ಕಾರ್ಯ ಮಾಡುತ್ತಿದ್ದಾರೆ. ಒಟ್ಟಿನಲ್ಲಿ ಪಬ್ಲಿಕ್ ನೆಕ್ಸ್ಟ್ ವರದಿಗೆ ಸ್ಪಂದಿಸಿ ಕೂಡಲೇ ಕಾರ್ಯವನ್ನು ಕೈಗೆತ್ತಿಕೊಂಡಿರುವುದು ವಿಶೇಷವಾಗಿದೆ.
Kshetra Samachara
01/10/2020 01:53 pm