ಹುಬ್ಬಳ್ಳಿ: ಬಹಳ ವೇಗದಲ್ಲಿ ಬೆಳೆಯುತ್ತಿರುವ ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಪಾರ್ಕಿಂಗ್ ಸಮಸ್ಯೆ ದಿನದಂದ ದಿನಕ್ಕೆ ಹೆಚ್ಚುತ್ತಿದೆ.ಅಲ್ಲದೇ ಪಾರ್ಕಿಂಗ್ ಅನುಮತಿ ಪಡೆದ ಅದೆಷ್ಟೋ ಕಟ್ಟಡಗಳು ಪಾರ್ಕಿಂಗ್ ಸ್ಥಳವನ್ನು ವಾಣಿಜ್ಯ ಚಟುವಟಿಕೆಗೆ ಬಳಕೆ ಮಾಡಿಕೊಳ್ಳುತ್ತಿದ್ದರೂ ಕೂಡ ಮಹಾನಗರ ಪಾಲಿಕೆ ಕಡಿವಾಣ ಹಾಕಲು ಹಿಂದೇಟು ಹಾಕುತ್ತಿದೆ.
ಹೌದು...ಪ್ರಖ್ಯಾತಿ ಮತ್ತು ಕುಖ್ಯಾತಿಗಳೆರಡನ್ನು ಶ್ರೇಣೀಕೃತ ಹಂತದಲ್ಲಿ ಸರಿದೂಗಿಸಿಕೊಂಡು ಹೋಗುತ್ತಿರುವ ಹು-ಧಾ ಮಹಾನಗರದಲ್ಲಿ ಸುಮಾರು 300ಕ್ಕೂ ಹೆಚ್ಚು ಕಟ್ಟಡಗಳು ಪಾರ್ಕಿಂಗ್ ಅತಿಕ್ರಮಣಗೊಳಿಸಿಕೊಂಡು ಮಹಾನಗರ ಪಾಲಿಕೆ ನಿಯಮ ಉಲ್ಲಂಘನೆ ಮಾಡಿದ್ದವು ಈ ಹಿಂದೆ ಪಾಲಿಕೆ ಕಾರ್ಯಾಚರಣೆ ನಡೆಸಿತ್ತು.ಆದರೇ ಈಗ ಸುಮಾರು ಮೂವತ್ತಕ್ಕೂ ಹೆಚ್ಚು ಕಟ್ಟಡಗಳು ಪಾರ್ಕಿಂಗ್ ಸ್ಥಳವನ್ನು ಅತಿಕ್ರಮಣಗೊಳಿಸಿದ್ದು, ಸ್ಥಳಾವಕಾಶ ಇಲ್ಲದೇ ರಸ್ತೆಯಲ್ಲಿ ಎಲ್ಲೆಂದರಲ್ಲಿ ಪಾರ್ಕ್ ಮಾಡುವಂತಾಗಿದೆ.
ಜನದಟ್ಟಣೆಯು ಬೆಳವಣಿಗೆಯಾಗುತ್ತಿದ್ದಂತೆಯೇ ವಾಹನ ಸಂಚಾರ ಕೂಡ ಹೆಚ್ಚಾಗುತ್ತಿದೆ.ಆದರೇ ಪಾರ್ಕಿಂಗ್ ಸಮಸ್ಯೆ ಮಾತ್ರ ನಿಯಂತ್ರಣಕ್ಕೆ ಬರುತ್ತಿಲ್ಲ ಅಲ್ಲದೇ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿ ಕೂಡ ಆಮೆಗತಿಯಲ್ಲಿ ಸಾಗುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಹು-ಧಾ ಮಹಾನಗರ ಪಾಲಿಕ ಅತಿಕ್ರಮಣ ಪಾರ್ಕಿಂಗ್ ಸ್ಥಳಗಳಿಗೆ ನೋಟಿಸ್ ನೀಡುವ ಮೂಲಕ ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೇಕಿದೆ.
Kshetra Samachara
24/09/2020 07:26 pm