ಹುಬ್ಬಳ್ಳಿ- ನಗರಾಭಿವೃದ್ಧಿ ಇಲಾಖೆ ಅಧಿಕಾರಿಗಳು ಬಿಲ್ಡರ್ಸ್ ಗಳು ಕಾನೂನು ಉಲ್ಲಂಘಿಸಿ, ಅಮರಗೋಳ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಅಕ್ಕಪಕ್ಕದ ಭೂಮಿಗಳನ್ನು ಒತ್ತುವರಿ ಮಾಡಿದ್ದಾರೆ ಎಂದು ಎಮ್ಡಿ. ಬೂದಿಹಾಳ ಆರೋಪಿಸಿದರು...
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಹೊರವಲಯದಲ್ಲಿರುವ ಅಮರಗೋಳ ವ್ಯಾಪ್ತಿಯ ಸರ್ವೆ ನಂ ,687/1ಅ.1.ಬ.1ಕಹಾಗೂ 687/4 ನಿರ್ಮಿಸಲಾಗಿರುವ ಲೇಔಟ್ ಗಳಿಗೆ ಸಂಬಂಧಿಸಿದಂತೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಗಳು ಕಾನೂನು ಉಲ್ಲಂಘಿಸಿದ್ದಾರೆ. ಅಷ್ಟೇ ಅಲ್ಲದೆ ಅಕ್ಕಪಕ್ಕದ ಜಮೀನುಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು. ಈ ಹಿಂದೆ ಹಲವಾರು ಬಾರಿ ಸಮಸ್ಯೆ ಬಗ್ಗೆ ಬೆಂಗಳೂರಿನ ನಗರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ, ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದು ಕೂಡಲೆ ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕು ಎಂದು ಮನವಿ ಮಾಡಿದರು....
Kshetra Samachara
30/09/2020 12:55 pm