ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಶಾಲೆಗೆ ಹೋಗಬೇಕಾದರೇ ಜೀವದ ಹಂಗು ತೊರೆಯಬೇಕಿದೆ: ಶಾಸಕರೇ ನೀವು ಮಲಗಿದ್ದಿರೋ ಹೇಗೋ...?

ಗದಗ: ಅದು ನಿಜಕ್ಕೂ ಆಧುನಿಕತೆಯ ಕನಸನ್ನು ಕಟ್ಟಿಕೊಂಡಿರುವ ಪುಟ್ಟ ಗ್ರಾಮ. ಈ ಗ್ರಾಮದ ಕಷ್ಟವನ್ನು ಕಣ್ಣು ಬಿಟ್ಟು ನೋಡಿದರೇ ನಿಜಕ್ಕೂ ಕಣ್ಣಿನಲ್ಲಿ ಕಣ್ಣೀರು ಬರುವುದು ಖಂಡಿತ. ಓದುವ ಆಸೆಯನ್ನು ಇಟ್ಟುಕೊಂಡಿರುವ ಮಕ್ಕಳ ಶಿಕ್ಷಣಕ್ಕೆ ಸಂಕಷ್ಟವೇ ಎದುರಾಗಿದೆ. ಏನಿದು ಸಮಸ್ಯೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲಿಟ್ ಡಿಟೈಲ್ಸ್...

ಹೀಗೆ ಹಳ್ಳವನ್ನು ದಾಟಿಕೊಂಡು ಹರಸಾಹಸ ಮಾಡುತ್ತಿರುವ ಮಕ್ಕಳನ್ನೊಮ್ಮೆ ನೋಡಿ. ಆಟ ಆಡಲು ಹಳ್ಳಕ್ಕೆ ಬಂದಿರುವ ಮಕ್ಕಳಂತೂ ಅಲ್ಲವೇ ಅಲ್ಲ ಇವರು ತಮ್ಮ ಶಿಕ್ಷಣದ ಹಕ್ಕನ್ನು ಪಡೆದುಕೊಳ್ಳಲು ಜೀವವನ್ನೆ ಪಣಕ್ಕಿಟ್ಟು ಹೋರಾಟ ನಡೆಸುತ್ತಿದ್ದಾರೆ. ಹೌದು.. ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕೊಕ್ಕರಗುಂದಿ ಗ್ರಾಮವು ಹಲವು ವರ್ಷಗಳಿಂದಲೂ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಒಳಗಾಗುತ್ತಲೇ ಬಂದಿದೆ. ಸಾರಿಗೆ ಬಸ್ ವ್ಯವಸ್ಥೆಯೂ ಸರಿಯಾಗಿ ಇಲ್ಲದೆ, ಹರಿಯುತ್ತಿರುವ ಎರಡು ಹಳ್ಳ ದಾಟಿದರೆ ಮಾತ್ರ ತರಗತಿಗಳಿಗೆ ಹಾಜರಿ ಬೀಳುತ್ತದೆ. ಗ್ರಾಮದಲ್ಲಿ ಮೂಲ ಸೌಲಭ್ಯಗಳು ಮರೀಚಿಕೆಯಾಗಿದ್ದು, 800ಕ್ಕೂ ಅಧಿಕ ಮತದಾರರನ್ನು ಹೊಂದಿದೆ. ತಾಲೂಕಿನ ಕಡೇ ಹಳ್ಳಿ ಇದಾಗಿದ್ದು, ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳು ಹಾಳಾಗಿವೆ. 1ರಿಂದ 7ನೇ ತರಗತಿ ವರೆಗೂ ಸರಕಾರಿ ಶಾಲೆ ಇದ್ದು, ಮುಂದೆ ವಿದ್ಯಾರ್ಥಿಗಳು ಶಿಕ್ಷಣಕ್ಕೆ ಬೇರೆ ಸ್ಥಳಗಳಿಗೆ ತೆರಳುತ್ತಿದ್ದಾರೆ. ಪ್ರಾಥಮಿಕ ಆರೋಗ್ಯ ಕೇಂದ್ರವೂ ಇಲ್ಲದೆ ಇರುವುದರಿಂದ ಆರೋಗ್ಯ ತಪಾಸಣೆಗೂ ಬೇರೆ ಊರುಗಳನ್ನೇ ಅವಲಂಬಿಸಬೇಕಾಗಿದೆ.

ಇನ್ನೂ ಇಲ್ಲಿಯ ಬಹುತೇಕ ರೈತರು ತಮ್ಮ ಬ್ಯಾಂಕ್ ಖಾತೆಗಳನ್ನು ಬಾಲೇಹೊಸೂರ ಗ್ರಾಮದಲ್ಲಿಯೇ ಹೊಂದಿದ್ದು, ಇದಕ್ಕೂ ದೈನಂದಿನ ಕೆಲಸಗಳನ್ನು ಬಿಟ್ಟು ಅಲೆದಾಡಬೇಕಾಗಿದೆ. ವಿದ್ಯಾರ್ಥಿನಿಯರ ಶೈಕ್ಷಣಿಕ ಪ್ರಗತಿಗೆ ಮಾರಕವಾಗಿದ್ದು, ಪ್ರೌಢಶಾಲೆ ಸೇರಬೇಕೆಂದರೆ ಬೆಳ್ಳಟ್ಟಿ-ಲಕ್ಷ್ಮೇಶ್ವರ ಮುಂತಾದ ಕಡೆಗಳಿಗೆ ತೆರಳಬೇಕಾಗಿದೆ. ಬೆಳಗ್ಗೆ 07-15 ಕ್ಕೆ ಒಂದೇ ಒಂದು ಬಸ್ ಬಿಟ್ಟರೆ ಶಾಲೆಗೆ ಹೋಗುವ ಕನಸು ಹುಸಿಯಾಗುವುದಂತೂ ಸತ್ಯ.

ಒಟ್ಟಿನಲ್ಲಿ ಮಕ್ಕಳ ಭವಿಷ್ಯದ ಬಗ್ಗೆ ಸಾಕಷ್ಟು ಆಶ್ವಾಸನೆ ನೀಡುವ ಜನಪ್ರತಿನಿಧಿಗಳು ಹಾಗೂ ಜವಾಬ್ದಾರಿಯುತ ಶಾಸಕರು ಈ ಬಗ್ಗೆ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಳ್ಳದೇ ಇರುವುದು ಅವ್ಯವಸ್ಥೆಗೆ ಕಾರಣವಾಗಿದೆ. ಶಾಲೆಗೆ ಹೋಗುವ ಸಂದರ್ಭದಲ್ಲಿ ಯಾವುದಾದರೂ ಅವಘಡ ಸಂಭವಿಸಿದರೇ ಯಾರು ಜವಾಬ್ದಾರರು ಎಂಬುವಂತ ಯಕ್ಷ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಶಾಸಕರೂ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ..

Edited By : Nagesh Gaonkar
Kshetra Samachara

Kshetra Samachara

12/09/2021 09:25 pm

Cinque Terre

77.35 K

Cinque Terre

4

ಸಂಬಂಧಿತ ಸುದ್ದಿ