ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸ್ಮಾರ್ಟ್ ಸಿಟಿ ಕಾಮಗಾರಿ ಕಿರಿಕಿರಿ ನಿವಾರಣೆಗೆ ʼಸಂಚಾರ ಸಂಪರ್ಕ ದಿವಸʼ ಅಭಿಯಾನ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ನಡೆಯುತ್ತಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಆದರೆ, ನಿಧಾನ ಗತಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಜನರು ದಿನನಿತ್ಯ ಒಂದಿಲ್ಲೊಂದು ಸಮಸ್ಯೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಜನರ ಸಂಚಾರದ ಸಮಸ್ಯೆಗಳ ಕುರಿತು ಚರ್ಚಿಸಲು ಹು-ಧಾ ಪೋಲಿಸ್ ಕಮಿಷನ್‌ ರೇಟ್ ವತಿಯಿಂದ ʼಸಂಚಾರ ಸಂಪರ್ಕ ದಿವಸʼ ಎಂಬ ವಿಶೇಷ ಕಾರ್ಯಕ್ರಮ ಜರುಗಿತು.

ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಸೇರಿದಂತೆ ಫ್ಲೈ ಓವರ್ ಕಾಮಗಾರಿಗಳು ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಹೃದಯಭಾಗವಾದ ಚೆನ್ನಮ್ಮ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ನಿಲಿಜನ ರಸ್ತೆ, ಹೊಸೂರು ವೃತ್ತ, ಗೋಕುಲ ರಸ್ತೆ ಸೇರಿದಂತೆ ಇನ್ನಿತರ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿದೆ. ಪರಿಣಾಮ ಜನರು ಸಂಚಾರಕ್ಕೆ ಸಂಬಂಧಿಸಿ ಹಲವಾರು ಸಮಸ್ಯೆ ಕುರಿತು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.

ಇನ್ನು, ಸಾರ್ವಜನಿಕರು ಸಂಚಾರಕ್ಕೆ ಸಂಬಂಧಿಸಿದಂತೆ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಮಾರ್ಗದರ್ಶನದಲ್ಲಿ ಉತ್ತರ ಸಂಚಾರಿ ಠಾಣೆಯಲ್ಲಿ ʼಸಂಚಾರ ಸಂಪರ್ಕ ದಿವಸʼ ಅಭಿಯಾನ ನಡೆಯಿತು.

ಈ ವೇಳೆ ಹಿರಿಯ ಸಂಚಾರಿ ಅಧಿಕಾರಿಗಳು ಸಾರ್ವಜನಿಕರ ಕುಂದುಕೊರತೆ ಆಲಿಸಿದರು. ನಂತರ, ಕೂಡಲೇ ಸಮಸ್ಯೆ ಪರಿಹರಿಸುವಲ್ಲಿ ಪ್ರಯತ್ನ ಮಾಡಲಾಗುವುದು ಎಂಬ ಭರವಸೆಯನ್ನು ಪೊಲೀಸ್ ಆಯುಕ್ತ ಲಾಬೂರಾಮ್ ನೀಡಿದರು.

Edited By : Somashekar
Kshetra Samachara

Kshetra Samachara

12/06/2022 04:16 pm

Cinque Terre

78.02 K

Cinque Terre

4

ಸಂಬಂಧಿತ ಸುದ್ದಿ