ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪ್ರತಿ ವಾರ್ಡ್ ಅಭಿವೃದ್ಧಿಗೆ ತಲಾ 50 ಲಕ್ಷ ಅನುದಾನ:ಮೇಯರ್ ಮೊದಲ ಭಾಷಣದಲ್ಲಿಯೇ ನಿರ್ಧಾರ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರದ ಪ್ರತಿಯೊಂದು ವಾರ್ಡ್ ಅಭಿವೃದ್ಧಿ ಹಿನ್ನೆಲೆಯಲ್ಲಿ ಪ್ರತಿಯೊಂದು ವಾರ್ಡ್ ಗೆ 50 ಲಕ್ಷ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಅಲ್ಲದೆ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತದೆ ಎಂದು ಮಹಾನಗರ ಪಾಲಿಕೆ ಮಹಾಪೌರರಾದ ಈರೇಶ ಅಂಚಟಗೇರಿ ಹೇಳಿದರು.

ಸಾಮಾನ್ಯ ಸಭೆಯ ಆಯುಕ್ತರ ಮೊದಲು ಮಾತನಾಡಿದ ಅವರು, ಅವಳಿನಗರದ ಜ್ವಲಂತ ಸಮಸ್ಯೆಗಳಿಗೆ, ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷಾತೀತವಾಗಿ ಶ್ರಮಿಸೋಣ. ಅಲ್ಲದೆ ಕುಡಿಯುವ ನೀರಿನ ಸಮಸ್ಯೆ, ರಸ್ತೆ, ಒಳಚರಂಡಿ ಸೇರಿದಂತೆ ಜನರಿಗೆ ಅಗತ್ಯವಿರುವ ಕೆಲಸವನ್ನು ಮಾಡುವ ಮೂಲಕ ಪ್ರತಿಯೊಂದು ವಾರ್ಡ್ ಅಭಿವೃದ್ಧಿಗೆ ಶ್ರಮಿಸೋಣ ಎಂದು ಅವರು ತಿಳಿಸಿದರು.

ಈಗಾಗಲೇ ಅಭಿವೃದ್ಧಿ ಕಾರ್ಯಗಳಿಗೆ ತಡೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ವಾರ್ಡ್ ಸದಸ್ಯರಿಗೂ ತಲಾ 50 ಲಕ್ಷ ಅನುದಾನವನ್ನು ಬಿಡುಗಡೆ ಮಾಡುವ ಮೂಲಕ ಅವಳಿನಗರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡೋಣ ಎಂದ ಅವರು, ತಮ್ಮನ್ನು ಮೇಯರ್ ಆಗಿ ಆಯ್ಕೆ ಮಾಡಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿದರು.

Edited By :
Kshetra Samachara

Kshetra Samachara

30/06/2022 12:46 pm

Cinque Terre

21.79 K

Cinque Terre

3

ಸಂಬಂಧಿತ ಸುದ್ದಿ