ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಧಾರವಾಡ ಜಿಲ್ಲೆಯ ಅನೇಕ ಕಡೆಗಳಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕ ಸಂಚಾರಕ್ಕೆ ಬಾರದಂತಾಗಿವೆ.
ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದ ಹೊರಗಿನ ಬಸವನ ಓಣಿಯ ರಸ್ತೆಯ ಪರಿಸ್ಥಿತಿ ಹೇಳತೀರದಾಗಿದೆ. ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರುಗದ್ದೆಯಂತಾಗಿದ್ದು, ಮನೆಯಿಂದ ಮನೆಗೆ ಹೋಗಲೂ ಜನ ಪರದಾಡುವಂತಾಗಿದೆ.
ಕೂಡಲೇ ಗ್ರಾಮ ಪಂಚಾಯ್ತಿ ಹಾಗೂ ಸಂಬಂಧಿಸಿದ ಅಧಿಕಾರಿಗಳು ಈ ರಸ್ತೆಯನ್ನು ಸುಧಾರಿಸಿ ಅಲ್ಲಿನ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಿದೆ.
Kshetra Samachara
15/07/2022 05:59 pm