ಅಳ್ನಾವರ: ಕಳೆದ ಮೂರು ದಿನಗಳಿಂದ ಮಳೆಯ ಪ್ರಮಾಣ ಕಡಿಮೆಯಾಗಿದ್ದರು ಹದಿನೈದು ದಿನಗಳಿಂದ ಸುರಿದ ಭಾರಿ ಪ್ರಮಾಣದ ಮಳೆ ಅವಾಂತರ ಸೃಷ್ಟಿಸಿದೆ.
ಅಳ್ನಾವರ ತಾಲೂಕಿನ ಹೊನ್ನಾಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ಬರುವ ಶಿವನಗರ ಗ್ರಾಮದಲ್ಲಿನ ಅಂಗನವಾಡಿ ಕೇಂದ್ರ ಕಟ್ಟಡ ನಿನ್ನೆ ಮಧ್ಯರಾತ್ರಿ ನೆಲಸಮಗೊಂಡಿದೆ. ಮಧ್ಯರಾತ್ರಿ ಅಂಗನವಾಡಿ ಕಟ್ಟಡ ಬಿದ್ದಿದ್ದರಿಂದ ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಸುಮಾರು ವರ್ಷಗಳಿಂದ ಅಂಗನವಾಡಿ ಕೇಂದ್ರ ಕಟ್ಟಡದ ಮಣ್ಣು ಕುಸಿಯುತ್ತಿತ್ತು.ಅದಕ್ಕೆ ಸಂಬಂಧ ಪಟ್ಟಂತೆ ಗ್ರಾ.ಪಂಗೆ ಹಾಗೂ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಆದ್ರೂ ಯಾರು ಇತ್ತ ಕಡೆ ಗಮನ ಹರಿಸಿಲ್ಲ. ಮುಂಜಾಗೃತಾ ಕ್ರಮ ಕೈಗೊಂಡಿಲ್ಲದ ಕಾರಣ ನಿನ್ನೆ ರಾತ್ರಿ ಅಂಗನವಾಡಿ ಕೇಂದ್ರ ಕಟ್ಟಡ ಸಂಪೂರ್ಣ ನೆಲಕ್ಕುರುಳಿದೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.
ಆದಷ್ಟು ಬೇಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವನ್ನು ಕೈಗೊಳ್ಳಬೇಕಾಗಿದೆ.
ಮಹಾಂತೇಶ ಪಠಾಣಿ, ಪಬ್ಲಿಕ್ ನೆಕ್ಸ್ಟ್ ಅಳ್ನಾವರ
Kshetra Samachara
21/07/2022 06:21 pm